ಹೈದರಾಬಾದ್ : 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಕೀಯದ ಮೇಲೆ ಕಣ್ಣಿಟ್ಟಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್  ಇತರ ಪಕ್ಷದ ಪ್ರಮುಖ ರಾಜಕೀಯ ಮುಖಂಡರನ್ನು ಭೇಟಿ ಮಾಡುತ್ತಿದ್ದಾರೆ. ಜುಲೈನಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಮೇಲೆ ಅವರ ಗಮನಹರಿಸುವ ದೃಷ್ಟಿಯಿಂದ ವಿರೋಧ ಪಕ್ಷಗಳೊಂದಿಗೆ ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಅವರು ಬಯಸಿದ್ದಾರೆ.‌‌ ಈ‌ ಮೂಲಕ ಮುಂದಿನ ಲೋಕಸಭಾ ಚುನಾವಣೆಗೂ‌ ಪ್ಲ್ಯಾನ್ ರೂಪಿಸುತ್ತಿದ್ದಾರೆ ಎನ್ನಲಾಗಿದೆ.

ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಈಗಾಗಲೇ ಭೇಟಿಯಾಗಿರುವ ಕೆ. ಚಂದ್ರಶೇಖರ್ ರಾವ್, ರಾಷ್ಟ್ರಪತಿ ಚುನಾವಣೆಗಾಗಿ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ, ಕಾಂಗ್ರೆಸ್‌ ನ ಮುಖಂಡರನ್ನು ಇಲಿಯವರೆಗೆ ಭೇಟಿಯಾಗಿಲ್ಲ.

ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮೇ 26 ರಂದು ಕೆಸಿಆರ್ ಭೇಟಿಯಾಗಲಿದ್ದಾರೆ. ಈ ಈ ತಿಂಗಳ ಅಂತ್ಯದಲ್ಲಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಲಿದ್ದು, ಬಿಹಾರಕ್ಕೂ ಭೇಟಿ ನೀಡಲು ಯೋಜಿಸಿದ್ದಾರೆ. ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ. ಕಳೆದ ತಿಂಗಳು ಮುಂಬೈಗೆ ಭೇಟಿ ನೀಡಿದ್ದ ಕೆಸಿಆರ್  ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ , ಎನ್ ಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದರು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೈದ್ರಾಬಾದಿನಲ್ಲಿ ಕೆಸಿಆರ್ ಅವರನ್ನು ಭೇಟಿಯಾಗಿದ್ದರು. 

Leave a Reply

Your email address will not be published. Required fields are marked *

error: Content is protected !!