ಇಸ್ಲಾಮಾಬಾದ್: ಲಾಹೋರ್‌ನ ಯಾವುದೇ ಪೆಟ್ರೋಲ್ ಬಂಕ್‍ನಲ್ಲಿ ಪೆಟ್ರೋಲ್ ಲಭ್ಯವಿಲ್ಲವೇ? ಎಟಿಎಂ ಯಂತ್ರಗಳಲ್ಲಿ ನಗದು ಲಭ್ಯವಿಲ್ಲವೇ? ರಾಜಕೀಯ ಬಿಕ್ಕಟ್ಟಿನಿಂದಾಗಿ ಜನಸಾಮಾನ್ಯರೇಕೆ ನರಳಬೇಕು ಪಾಕಿಸ್ತಾನದಲ್ಲಿರುವ ಸ್ಥಿತಿಗತಿಗಳ ಬಗ್ಗೆ ಮಾಜಿ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಟ್ವಿಟ್ಟರ್ ಮೂಲಕ ಕಿಡಿಕಾರಿದ್ದಾರೆ.

ಲಾಹೋರ್‌ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಮ್‍ನಲ್ಲಿ ಹಣವಿಲ್ಲ ಎಂದು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಪ್ರಸ್ತುತ ಪ್ರಧಾನಿ ಶಹಾಬಾಜ್‌ ಷರೀಫ್ ಸೇರಿದಂತೆ  ರಾಜಕೀಯ ನಾಯಕರಿಗೆ ಪ್ರಶ್ನಿಸಿದ್ದಾರೆ. 

ಹಫೀಜ್ ಈ ಹಿಂದೆ ಪಾಕಿಸ್ತಾನ ಕ್ರಿಕೆಟ್ ನಿಯಂತ್ರಣ ಮಂಡಳಿಯ ನಿರ್ಧಾರಗಳ ಬಗ್ಗೆ ಕೂಡ ಚಕಾರ ಎತ್ತಿದ್ದರು. ಇದೀಗ ಸರ್ಕಾರದಿಂದ ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!