ವಾಷಿಂಗ್ಟನ್: ಅಮೆರಿಕಾದ ಟೆಕ್ಸಾಸ್‍ನಲ್ಲಿರುವ ರಾಬ್ ಎಲಿಮೆಂಟರಿ ಶಾಲೆಯಲ್ಲಿ ಬಂದೂಕುಧಾರಿಯಿಂದ ಶೂಟೌಟ್ ನಡೆದಿದೆ. ಶೂಟೌಟ್‍ಗೆ 18 ವಿದ್ಯಾರ್ಥಿಗಳು ಹಾಗೂ ಇತರೆ 3 ಮಂದಿ ಬಲಿ ಆಗಿರುವ ಘಟನೆ ನಡೆದಿದೆ.

ಈ ಬಗ್ಗೆ ಟೆಕ್ಸಾಸ್ ಗವರ್ನರ್ ಗ್ರೆಗ್ ಅಬೊಟ್ ಮಾಹಿತಿ ನೀಡಿದ್ದು, ಸುಮಾರು 18 ವರ್ಷ ವಯಸ್ಸಿನ ಸಾಲ್ವಡೆರ್ ರೊಮೊಸ್ (18) ಎಂಬಾತ ಏಕಾಏಕಿ ಗುಂಡಿನ ಮಳೆಗರೆದಿದ್ದಾನೆ. ಘಟನೆಯಲ್ಲಿ ಒಟ್ಟಾರೆಯಾಗಿ 21 ಜನರು ಮೃತಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಭದ್ರತಾ ಸಿಬ್ಬಂದಿ ಪ್ರತಿದಾಳಿಯಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!