ಹುಬ್ಬಳ್ಳಿ: ಮೇ 20ರಂದು ಧಾರವಾಡ ಜಿಲ್ಲೆಯಲ್ಲಿ ನಡೆದಿದ್ದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ 5 ವರ್ಷದ ಮಗು ಸೇರಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 

ಆರಾಧ್ಯ ಹುತಮಲ್ಲಣ್ಣವರ (5) ಹಾಗೂ ಮುತ್ತು ಮರಿಗೌಡ (16) ಎಂಬವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಇಬ್ಬರನ್ನು 6 ದಿನಗಳ ಹಿಂದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. 

ಇದೇ ಮೇ 20 ರಂದು ಧಾರವಾಡದ ಬಾಡ ಬಳಿ ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಮೃತಪಟ್ಟಿದ್ದರು. ಐಸಿಯುನಲ್ಲಿದ್ದ ಇಬ್ಬರು ಇಂದು ಮೃತಪಟ್ಟಿದ್ದು ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

error: Content is protected !!