ಗುಂಡ್ಲುಪೇಟೆ : ಮನೆಯಲ್ಲಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಸಿಲಿಂಡರ್ ಸ್ಫೋಟಗೊಂಡು ಯುವಕನೋರ್ವ ಸಾವನ್ನಪ್ಪಿದ್ದ ದುರ್ಘಟನೆ ಗುಂಡ್ಲುಪೇಟೆ ತಾಲೂಕಿನ ಮಳವಳ್ಳಿ ಗ್ರಾಮದಲ್ಲಿ ನಡೆದಿದೆ. ಸಿಲಿಂಡರ್ ಸ್ಫೋಟ ಹಾಗೂ ವಿದ್ಯುತ್ ಸ್ಪರ್ಶದಿಂದ ಮಳವಳ್ಳಿ ಗ್ರಾಮದ ಸ್ವಾಮಿ (28) ಮೃತ ದುರ್ದೈವಿ.

ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಮನೆ ಮೇಲ್ಛಾವಣಿ ಹಾರಿಹೋಗಿದ್ದು, ಮನೆಯಲ್ಲಿದ್ದ ವಿವಿಧ ವಸ್ತುಗಳು ಸಹ ಸುಟ್ಟು ಹೋಗಿದೆ. ಸ್ಥಳಕ್ಕೆ ಗುಂಡ್ಲುಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!