ಮೈಸೂರು: ಮೂರು ಹೊತ್ತು ಮ್ಯೂಗಿಯನ್ನೇ ಉಣಬಡಿಸುತ್ತಿದ್ದಾಳೆ ಎಂದು ಬೇಸತ್ತು ಪತಿಯೋರ್ವ ಪತ್ನಿಗೆ ವಿಚ್ಛೇದನ ನೀಡಿದ ಘಟನೆ ಮೈಸೂರಿನಿಂದ ವರದಿಯಾಗಿದೆ. ಬೆಳಗಿನ ತಿಂಡಿ, ಮಧ್ಯಾಹ್ನದ ಊಟ ಸಾಲದ್ದಕ್ಕೆ ರಾತ್ರಿ ಊಟಕ್ಕೂ ಪತ್ನಿ ಮ್ಯಾಗಿಯನ್ನೇ ಬಡಿಸುತ್ತಿದ್ದಾಳೆ. ಅದರ ಹೊರತು ಇತರ ಯಾವುದೇ ಪದಾರ್ಥಗಳು ಪತ್ನಿ ಕೈ ರುಚಿಯಲ್ಲಿ ಸಿದ್ಧವಾಗುದಿಲ್ಲ ಎಂದು ಆರೋಪಿಸಿ ಪತಿ ವಿಚ್ಛೇದನಕ್ಕೆ ಮುಂದಾಗಿದ್ದಾನೆ.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಂ.ಎಲ್.ರಘುನಾಥ್, ಸಣ್ಣಪುಟ್ಟ ವಿಚಾರಗಳಿಗೆ ದಂಪತಿಗಳು ವಿವಾಹ ವಿಚ್ಛೇದನ ಪಡೆಯುವ ವೈವಾಹಿಕ ಪ್ರಕರಣಗಳ ಕುರಿತು ಮಾತನಾಡಿದ್ದಾರೆ.

ಬಳ್ಳಾರಿಯಲ್ಲಿ ಜಿಲ್ಲಾ ನ್ಯಾಯಾಧೀಶರಾಗಿದ್ದಾಗ ಈ ಪ್ರಕರಣ ಕಂಡು ಬಂದಿತ್ತು. ಮ್ಯಾಗಿ ನೂಡಲ್ಸ್ ಹೊರತುಪಡಿಸಿ ಬೇರೆ ಯಾವುದೇ ಅಡುಗೆ ಮಾಡಲು ನನ್ನ ಹೆಂಡತಿಗೆ ಗೊತ್ತಿಲ್ಲ, ಉಪಹಾರ, ಮಧ್ಯಾಹ್ನ ಊಟ ಹಾಗೂ ರಾತ್ರಿ ಊಟಕ್ಕೆಲ್ಲಾ ಮ್ಯಾಗಿ ನೂಡೆನ್ಸ್ ಮಾಡುತ್ತಿದ್ದಳು. ಪ್ರಾವಿಷನ್ ಸ್ಟೋರ್’ಗೆ ಹೋದರೆ ಆಕೆ ಕೇವಲ ಇನ್‌ಸ್ಟಂಟ್ ನೂಡಲ್ಸ್ ಮಾತ್ರ ತರುತ್ತಿದ್ದಳು ಎಂದು ವ್ಯಕ್ತಿ ಹೇಳಿಕೊಂಡಿದ್ದ. ಈ ಕೇಸ್’ಗೆ ಮ್ಯಾಗಿ ಕೇಸ್ ಎಂದು ಹೆಸರಿಡಲಾಗಿತ್ತು. ವಾದ ಪ್ರತಿವಾದದ ಬಳಿಕ ಅಂತಿಮವಾಗಿ ದಂಪತಿಗಳು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದರು ಎಂದು ಹೇಳಿದ್ದಾರೆ.

ವೈವಾಹಿಕ ಸಮಸ್ಯೆಗಳನ್ನು ಇತ್ಯರ್ಥಪಡಿಸುವುದು ಸ್ವಲ್ಪ ಕಷ್ಟ. ದಂಪತಿಗಳು ತಮ್ಮ ಮಕ್ಕಳ ಭವಿಷ್ಯವನ್ನು ಪರಿಗಣಿಸಿದರೆ ಹೆಚ್ಚಿನ ಪುನರ್ಮಿಲನಗಳು ಸಂಭವಿಸುತ್ತವೆ. “ಜೋಡಿಗಳ ನಡುವೆ ರಾಜಿ ತರಲು ಮತ್ತು ಅವರನ್ನು ಮತ್ತೆ ಒಂದುಗೂಡಿಸಲು ನಾವು ಭಾವನೆಗಳನ್ನು ಬಳಸುತ್ತೇವೆ. ಇಲ್ಲಿ ದೈಹಿಕ ಸಮಸ್ಯೆಗಳಿಗಿಂತ ಮಾನಸಿಕ ಸಮಸ್ಯೆಗಳು ಹೆಚ್ಚು ಕೆಲಸ ಮಾಡುತ್ತವೆ. ಹೆಚ್ಚಿನ ಸಂದರ್ಭಗಳಲ್ಲಿ, ದಂಪತಿಗಳು ಮತ್ತೆ ಒಂದಾದರೂ, ಮನಸ್ತಾಪಗಳ ಗುರುತುಗಳು ಹಾಗೆಯೇ ಉಳಿಯುತ್ತವೆ. 800-900 ವೈವಾಹಿಕ ಪ್ರಕರಣಗಳಲ್ಲಿ, ನಾವು ಸುಮಾರು 20-30 ಪ್ರಕರಣಗಳಲ್ಲಿ ಯಶಸ್ವಿಯಾಗುತ್ತೇವೆ. ಹಿಂದಿನ ಲೋಕ ಅದಾಲತ್‌ನಲ್ಲಿ ಸುಮಾರು 110 ವಿಚ್ಛೇದನ ಪ್ರಕರಣಗಳಲ್ಲಿ ಕೇವಲ 32 ಪ್ರಕರಣಗಳಲ್ಲಿ ಪುನರ್ಮಿಲನ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ಮೈಸೂರು ಜಿಲ್ಲೆಯು ಐದು ಕೌಟುಂಬಿಕ ನ್ಯಾಯಾಲಯಗಳನ್ನು ಹೊಂದಿದ್ದು, ಪ್ರತಿಯೊಂದು ನ್ಯಾಯಾಲಯವು ಸುಮಾರು 500 ವೈವಾಹಿಕ ಪ್ರಕರಣಗಳನ್ನು ಹೊಂದಿದೆ. ಅವುಗಳಲ್ಲಿ ಸುಮಾರು 800 ಪ್ರಕರಣಗಳು ವಿಚ್ಛೇದನಕ್ಕಾಗಿಯೇ ಆಗಿವೆ.

ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಪ್ರಕರಣಗಳು ಹೆಚ್ಚಾಗತೊಡಗಿವೆ. ವಿಚ್ಛೇದನ ಪಡೆಯುವ ಮೊದಲು ದಂಪತಿಗಳು ಕನಿಷ್ಠ ಒಂದು ವರ್ಷ ಒಟ್ಟಿಗೆ ಇರಬೇಕೆಂಬ ಕಾನೂನು ಇದೆ. ಅಂತಹ ಕಾನೂನು ಇಲ್ಲದಿದ್ದರೆ, ಮದುವೆ ಮಂಟಪಗಳಿಂದಲೇ ನೇರವಾಗಿ ವಿಚ್ಛೇದನ ಅರ್ಜಿಗಳನ್ನು ಸಲ್ಲಿಕೆಯಾಗುತ್ತಿತ್ತು. ವಿವಾಹವಾದ ಕೇವಲ ಒಂದು ದಿನದ ನಂತರ ದಂಪತಿಗಳು ವಿಚ್ಛೇದನದಕ್ಕೆ ಅರ್ಜಿ ಸಲ್ಲಿಸಿದ ಪ್ರಕರಣಗಳೂ ಕೂಡ ನ್ಯಾಯಾಲಯದಲ್ಲಿ ಇದೆ, ಸಂಗಾತಿಯೊಂದಿಗೆ ಮಾತನಾಡದಿದ್ದಕ್ಕಾಗಿ, ತಟ್ಟೆಯ ತಪ್ಪಾದ ಬದಿಯಲ್ಲಿ ಉಪ್ಪು ಹಾಕಿದ್ದಕ್ಕಾಗಿ, ಮದುವೆಯ ಸೂಟ್ ಅನ್ನು ತಪ್ಪಾಗಿ ಹೊಲಿದಿದ್ದಕ್ಕಾಗಿ, ಹೆಂಡತಿಯನ್ನು ಹೊರಗೆ ಕರೆದೊಯ್ಯದಿದ್ದಕ್ಕಾಗಿ ಮತ್ತು ಇತರ ಕಾರಣಗಳಿಗಾಗಿ ವಿಚ್ಛೇದನಕ್ಕೆ ಅರ್ಜಿಗಳು ದಾಖಲಾಗಿವೆ. ಲವ್ ಅಥವಾ ಆರೆಂಜ್ ಮ್ಯಾರೆಜ್ ಎಂಬ ವ್ಯತ್ಯಾಸವಿಲ್ಲ ಎರಡೂ ರೀತಿಯ ವಿವಾಹಗಳಲ್ಲೂ ವಿಚ್ಛೇದನಕ್ಕೆ ಅರ್ಜಿಗಳು ದಾಖಲಾಗುತ್ತಿವೆ ಎಂದಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!