ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದಕ್ಕೆ ಪ್ರತಿಕ್ರಿಯಿಸಿರುವ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ , “ಎಡವೂ ಬೇಡ, ಬಲವೂ ಬೇಡ. ಇತಿಹಾಸವನ್ನು ಇತಿಹಾಸವಾಗಿಯೇ ಬೋಧಿಸಿ” ಎಂದು ಸಲಹೆ ನೀಡಿದರು.


ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಯದುವೀರ್ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಕ್ಕಳಿಗೆ ಸರಿಯಾದ ಇತಿಹಾಸ ಹೇಳಿಕೊಡಬೇಕು. ಇತಿಹಾಸವನ್ನು ತಿದ್ದಬಾರದು. ಮಕ್ಕಳಿಗೆ ಪ್ರಸ್ತುತ ಕಾಲಕ್ಕೆ ಅನುಗುಣವಾಗಿ ಪಠ್ಯವನ್ನು ಅಳವಡಿಸಬೇಕು” ಎಂದರು.

 “ಪಾರಂಪರಿಕ ಕಟ್ಟಡಗಳ ಉಳಿವಿನ ಕುರಿತು ಮಾತನಾಡಿದ ಯದುವೀರ್, “ಈಗಿರುವ ಟೆಂಡರ್ ಪ್ರಕ್ರಿಯೆ ಪ್ರಕಾರ, ಕಟ್ಟಡವನ್ನು ನೆಲಸಮ ಮಾಡುವುದು ಮತ್ತು ಮರು ನಿರ್ಮಾಣ ಮಾಡಬೇಕೆಂದಿದೆ. ಪಾರಂಪರಿಕ ಕಟ್ಟಡಗಳನ್ನು ಪುನಶ್ಚೇತನಗೊಳಿಸಲು ಅವಕಾಶ ಕಲ್ಪಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಪುನಶ್ವೇತನಕ್ಕೆ ಅನುಮತಿ ಸಿಗುತ್ತಿಲ್ಲ. ಅದು ಕೂಡ ಸರಿಯಾಗಬೇಕು ಎಂದರು. ಆಯುರ್ವೇದಿಕ್ ಆಸ್ಪತ್ರೆ ಚನ್ನಾಗಿ ಪುನಶ್ಚೇತನವಾಗಿದೆ. ಕೇವಲ ಸ್ಮಾಕರವಾಗಿಲ್ಲ, ಜನರಿಗೆ ಬಳಕೆ ಆಗುತ್ತಿದೆ. ಪಾರಂಪರಿಕ ಕಟ್ಟಡಗಳನ್ನು ಉಳಿಸುವ ನಿಟ್ಟಿನಲ್ಲಿ ಈ ಕಟ್ಟಡ ಮಾದರಿ ಆಗಬೇಕು” ಎಂದರು.

Leave a Reply

Your email address will not be published. Required fields are marked *

error: Content is protected !!