ಉಡುಪಿ: ಲವ್ ಜಿಹಾದ್ ನಮ್ಮ ಹೆಣ್ಣುಮಕ್ಕಳನ್ನು ನರಕದ ಕೂಪಕ್ಕೆ ತಳ್ಳುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಪ್ರೀತಿಯ ಹೆಸರಲ್ಲಿ ಮದುವೆಯಾಗ್ತಾರೆ ಅಥವಾ ಮದುವೆಯಾಗದೆ ಮೋಸ ಮಾಡ್ತಾರೆ. ಹಾಗೆಯೇ ಕೈಗೊಂದು ಮಗು ಕೊಟ್ಟು ಓಡಿ ಹೋಗ್ತಾರೆ. ತಲಾಖ್ ಎಂದು ಹೇಳಿ ಇನ್ನೊಬ್ಬರನ್ನ ಮದುವೆಯಾಗ್ತಾರೆ. ಇದರಿಂದ ನಮ್ಮ ಹೆಣ್ಣುಮಕ್ಕಳನ್ನು ನರಕದ ಕೂಪಕ್ಕೆ ತಳ್ಳಿದಂತಾಗುತ್ತಿದೆ ಎಂದರು.

ದೇಶದ ಅನೇಕ ಭಾಗಗಳಲ್ಲಿ ನಮ್ಮ ಹೆಣ್ಣುಮಕ್ಕಳು ಸಮಸ್ಯೆ ಎದುರಿಸುತ್ತಿದ್ದಾರೆ. ಲವ್ ಜಿಹಾದ್‌ಗೆ ಹೆಣ್ಣುಮಕ್ಕಳು ಬಲಿಯಾದರೆ ತಂದೆ-ತಾಯಿಯ ದುಃಖ ಕೇಳುವವರು ಯಾರು? ಲವ್ ಜಿಹಾದ್ ತಡೆಗೆ ಬಲವಾದ ಕಾನೂನು ಜಾರಿ ಮಾಡುವ ಅಗತ್ಯವಿದೆ. ಹಿಂದಿನಿಂದಲೂ ಈ ಬಗ್ಗೆ ವಾದ ಮಾಡಿಕೊಂಡು ಬಂದಿದ್ದೇನೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!