ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (Airports Authority of India- AAI) ಸಾರ್ವಜನಿಕ ವಲಯದ ಉದ್ಯಮವಾಗಿದ್ದು, ಸಂಸತ್ತಿನ ಕಾಯಿದೆಯ ಮೂಲಕ ರಚಿಸಲಾಗಿದೆ. ಈ ಭಾರತೀಯ ವಿಮಾನ ನಿಲ್ದಾಣದ ಪ್ರಾಧಿಕಾರದಲ್ಲಿ ಒಟ್ಟಾರೆ 400 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಜ್ಯೂನಿಯರ್​ ಎಕ್ಸಿಕ್ಯೂಟಿವ್​ ಹುದ್ದೆಗಳ ಭರ್ತಿ ಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 14 ಆಗಿದೆ.

ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ೪೦೦ ಮಂದಿ ಅಭ್ಯರ್ಥಿಗಳು ಬೇಕಾಗಿದೆ. ವೇತನಕ್ಕೆ ಸಂಬಂಧಪಟ್ಟಂತೆ ಪ್ರತಿ ತಿಂಗಳು ರೂ. 40,000 ದಿಂದ 1,40,000 ರವರೆಗೆ ನೀಡಲಾಗುತ್ತದೆ. ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಭೌತಶಾಸ್ತ್ರ ಮತ್ತು ಗಣಿತದಲ್ಲಿ ಬಿಎಸ್ಸಿ, ಬಿ.ಇ ಅಥವಾ ಬಿಟೆಕ್​​ ಪೂರ್ಣಗೊಳಿಸಿರಬೇಕು. ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 27 ವರ್ಷಗಳು ಮೀರಿರಬಾರದು

ಅರ್ಜಿ ಶುಲ್ಕ:
ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಮಹಿಳಾ ಅಭ್ಯರ್ಥಿಗಳು: 81 ರೂ
ಎಲ್ಲಾ ಇತರ ಅಭ್ಯರ್ಥಿಗಳು: 1000 ರೂ

ಅರ್ಜಿ ಶುಲ್ಕ ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ, ದಾಖಲೆಗಳ ಪರಿಶೀಲನೆ, ಧ್ವನಿ ಪರೀಕ್ಷೆ ಮತ್ತು ಹಿನ್ನೆಲೆ ಪರಿಶೀಲನೆ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜೂನ್​ 15ರಿಂದ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 14

ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ವೆಬ್‌ಸೈಟ್: aai.aero

ಅರ್ಜಿ ಸಲ್ಲಿಕೆ ಪ್ರಕ್ರಿಯೆ

-ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ. ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
-ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
-ಜೂನಿಯರ್ ಎಕ್ಸಿಕ್ಯೂಟಿವ್ ಆನ್‌ಲೈನ್‌ನಲ್ಲಿ ಅನ್ವಯಿಸಿ ಲಿಂಕ್ ಅನ್ನು ಕ್ಲಿಕ್ ಮಾಡಿ.
ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
-ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

error: Content is protected !!