ಕೋರ್ಟ್ ಗೆ ಹಾಜರುಪಡಿಸಲು ಕರೆತರುತ್ತಿದ್ದಾಗ ಪೊಲೀಸರಿಂದ ಎಸ್ಕೇಪ್ ಆಗಿದ್ದ ಆರೋಪಿಯನ್ನು ಕಾಸರಗೋಡು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ವಿದ್ಯಾನಗರ ಠಾಣಾ ವ್ಯಾಪ್ತಿಯ ಆಲಂಪಾಡಿಯ ಅಮೀರ್ ಅಲಿ ಬಂಧಿತ ಆರೋಪಿಯಾಗಿದ್ದಾನೆ. ಮಾದಕ ವಸ್ತು ಸಾಗಾಟ ಸೇರಿದಂತೆ ಹಲವಾರು ಪ್ರಕರಣಗಳ ಆರೋಪಿಯಾಗಿರುವ ಅಮೀರ್ ಅಲಿ ಕಾರಿನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದಾಗ ಬದಿಯಡ್ಕದಿಂದ ಬಂಧಿಸಲಾಗಿತ್ತು. ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಕಣ್ಣೂರು ಸೆಂಟ್ರಲ್ ಜೈಲ್ ನಲ್ಲಿದ್ದ ಆರೋಪಿಯನ್ನು ಪ್ರಕರಣ ವೊಂದಕ್ಕೆ ಸಂಬಂಧಪಟ್ಟಂತೆ ಕಾಸರಗೋಡು ನ್ಯಾಯಾಲಯಕ್ಕೆ ಕರೆ ತರುತಿದ್ದಾಗ ಕಾಸರಗೋಡು ವಿದ್ಯಾನಗರ ಬಳಿ ಈತ ಪರಾರಿಯಾಗಿದ್ದ. ತನಿಖೆ ನಡೆಸಿದ ಪೊಲೀಸರು ಬೆಂಗಳೂರಿನಲ್ಲಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!