ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ನಾಳೆ( ಜುಲೈ-1 ಶುಕ್ರವಾರ) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಆದೇಶ ಹೊರಡಿ‍ಸಿದ್ದಾರೆ.

ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಶಾಲಾ – ಕಾಲೇಜು, ಪಿಯುಸಿ ಡಿಗ್ರಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಭಾರತೀಯ ಹವಾಮಾನ ಇಲಾಖೆಯು ಶುಕ್ರವಾರದ ಬೆಳಗ್ಗೆ 8.30ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಆದರೆ ನಾಳೆಯೂ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಎಲ್ಲಾ ಅಂಗನವಾಡಿ ಕೇಂದ್ರ, ಶಾಲೆ-ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಜಿಲ್ಲಾಡಳಿತವು ರಜೆ ಘೋಷಣೆ ಮಾಡಿದೆ.

Leave a Reply

Your email address will not be published. Required fields are marked *

error: Content is protected !!