ಮಣಿಪುರದ ನೋನಿ ಜಿಲ್ಲೆಯ ಪಟ್ಟಣವೊಂದರಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ. 13 ಮಂದಿ ಗಾಯಗೊಂಡಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಭೂಕುಸಿತದಿಂದಾಗಿ ಹತ್ತಿರದ ನದಿ ಹರಿವಿಗೂ ಅಡ್ಡಿಯಾಗಿದೆ. ಅವಶೇಷಗಳ ತೆರವಿನಿಂದ ಪ್ರವಾಹ ಉಂಟಾಗುವ ಸಾಧ್ಯತೆ ಇದ್ದು, ಪರಿಸರ ನಾಶಕ್ಕೂ ಕಾರಣವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆ ನೀಡಿದ್ದು, ಮಕ್ಕಳನ್ನು ನದಿ ಬಳಿ ಹೋಗಲು ಬಿಡದಂತೆ ಅಧಿಕಾರಿಗಳು ಕೇಳಿಕೊಂಡಿದ್ದಾರೆ.

ದುರಂತದಲ್ಲಿ ಸಾವನ್ನಪ್ಪಿದ ಹೆಚ್ಚಿನವರು ಸೇನೆಗೆ ಸೇರಿದವರು ಎನ್ನಲಾಗಿದೆ. ನಾಪತ್ತೆಯಾದವರ ಹುಡುಕಾಟ ಹಾಗೂ ರಕ್ಷಣೆಗೆ ಜಿಲ್ಲಾಡಳಿತ ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದೆ. ನಿರಂತರ ಮಳೆಯಿಂದಾಗಿ ಪರಿಸ್ಥಿತಿ ಉಲ್ಬಣಗೊಳ್ಳುವ ಸಾಧ್ಯತೆ ಇದೆ ಎಂದು ಸ್ಥಳೀಯರಿಗೆ ಎಚ್ಚರಿಕೆ ನೀಡಲಾಗಿದೆ. 

Leave a Reply

Your email address will not be published. Required fields are marked *

error: Content is protected !!