ಉತ್ತರಖಂಡ್, ಐವರು ಕಾಮುಕರ ತಂಡವೊಂದು ಆರು ವರ್ಷದ ಬಾಲಕಿ ಹಾಗೂ ಆಕೆಯ ತಾಯಿಯ ಮೇಲೆ ಪಶುಗಳಂತೆ ಎರಗಿ ಗ್ಯಾಂಗ್ ರೇಪ್ ನಡೆಸಿದ ಪ್ರಕರಣ ಉತ್ತರಖಂಡದ ಹರಿದ್ವಾರ ಜಿಲ್ಲೆಯಲ್ಲಿ ನಡೆದಿದೆ.

ಕಾಮುಕರ ತಂಡ ಕಾರಿನಲ್ಲಿ ತೆರಳುತ್ತಿರುವ ವೇಳೆಯಲ್ಲಿಯೇ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಕಾಮುಕರ ಅಟ್ಟಹಾಸದಿಂದ ಮಹಿಳೆ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಮತ್ತೊಂದೆಡೆ ಆರು ವರ್ಷದ ಬಾಲಕಿಗೆ ಅತ್ಯಾಚಾರ ಎಸಗುವ ವೇಳೆ ರಕ್ತಶ್ರಾವವಾದ ಹಿನ್ನೆಲೆಯಲ್ಲಿ ಆಕೆಯನ್ನು ಕಾರಿನಿಂದ ರಸ್ತೆ ಮಧ್ಯೆ ಅವರನ್ನು ಎಸೆದು ಪರಾರಿಯಾಗಿದ್ದಾರೆ.

ಇನ್ನು ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ತುರ್ತು ಕಾರ್ಯಾಚರಣೆ ನಡೆಸಿ ಮೃಗಗಳಂತೆ ವರ್ತಿಸಿದ ಐವರು ಕಾಮುಕರನ್ನು ಬಂಧಿಸಿ ಕಂಬಿ ಹಿಂದೆ ಲಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 100-150 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅಲ್ಲದೆ ಕೆಲವು ಕಾಲ್ ಡಿಟೈಲ್ಸ್ ಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಲಾಗಿದೆ ಎಂದು ಹರಿದ್ವಾರದ ಎಸ್ ಎಸ್ ಪಿ ಯೊಗೇಂದ್ರ ಸಿಂಗ್ ತಿಳಿಸಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!