ರೈಲ್ವೆ ನೇಮಕಾತಿಯ ನಾರ್ಥ್​ ಸೆಂಟ್ರಲ್​ನಲ್ಲಿ 1659 ಅಪ್ರೆಂಟಿಸ್ (Apprentice) ​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್​ಎಸ್​​ಎಲ್​ಸಿ ಮತ್ತು ಐಟಿಐ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಉತ್ತರ ಪ್ರದೇಶದ ವಿವಿಧ ರೈಲ್ವೆ ಕೇಂದ್ರದಲ್ಲಿ ಕಾರ್ಯ ನಿರ್ವಹಣೆ ಮಾಡಬೇಕಿದೆ. ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 1 ಆಗಿದೆ.

ಸಂಸ್ಥೆಯ ಹೆಸರು: ರೈಲ್ವೇ ನೇಮಕಾತಿ ಕೋಶ ಉತ್ತರ ಮಧ್ಯ ರೈಲ್ವೆ (RRC NCR)
ಹುದ್ದೆಯ ಹೆಸರು: ಆಕ್ಟ್ ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ: 1659
ಉದ್ಯೋಗ ಸ್ಥಳ: ಪ್ರಯಾಗ್ರಾಜ್ – ಝಾನ್ಸಿ – ಆಗ್ರಾ
ವೇತನ: 18000-56900 ರೂ. ಪ್ರತಿ ತಿಂಗಳು
ವಿಭಾಗ ಹುದ್ದೆ ಸಂಖ್ಯೆ
ಪ್ರಯಾಗರಾಜ್ 703
ಝಾನ್ಸಿ 660
ಆಗ್ರಾ 296

ಶೈಕ್ಷಣಿಕ ಅರ್ಹತೆ (Education Qualification): ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ, ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ (Age Limit):  ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 15 ವರ್ಷಗಳು ಮತ್ತು ಗರಿಷ್ಠ 24 ವರ್ಷಗಳನ್ನು ಹೊಂದಿರಬೇಕು.

ಇದನ್ನು ಓದಿ: ಅಗ್ನಿಪಥ ಯೋಜನೆ ಮೂಲಕ ಸೇನೆಯಲ್ಲಿ ಸೇವೆ ಸಲ್ಲಿಸಿ; ಇಲ್ಲಿದೆ ಅರ್ಜಿ ಸಲ್ಲಿಕೆ ಸಂಪೂರ್ಣ ವಿವರ

ವಯೋಮಿತಿ ಸಡಿಲಿಕೆ (Age Exception):
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಪ.ಜಾ, ಪ. ಪಂ ಅಭ್ಯರ್ಥಿಗಳು: 05 ವರ್ಷಗಳು
ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ (Application Fees):
ಪ.ಜಾ, ಪ.ಪಂ, ವಿಕಲ ಚೇತನಮಹಿಳಾ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಎಲ್ಲಾ ಇತರ ಅಭ್ಯರ್ಥಿಗಳು: 100 ರೂ

ಪಾವತಿ ವಿಧಾನ ( payment Method): ಆನ್‌ಲೈನ್

ಆಯ್ಕೆ ಪ್ರಕ್ರಿಯೆ (Selection Process):
ಮೆರಿಟ್ ಪಟ್ಟಿ

ಪ್ರಮುಖ ದಿನಾಂಕಗಳು (Important Links):
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02 ಜುಲೈ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01 ಆಗಸ್ಟ್  2022

ಅಧಿಸೂಚನೆ ಪ್ರಮುಖ ಲಿಂಕ್‌ಗಳು (Notification Links)
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: rrcpryj.org

ಇದನ್ನು ಓದಿ: ಬೀದರ್​ ಜಿಲ್ಲಾ ನ್ಯಾಯಾಲಯದಲ್ಲಿ 32 ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಆದವರಿಗೆ ಅವಕಾಶ

ಅರ್ಜಿ ಸಲ್ಲಿಕೆ ವಿಧಾನ (How To Apply)

ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.

ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

error: Content is protected !!