ತಿರುವನಂತಪುರಂ: ಕೇರಳದ ಪಾಲಕ್ಕಾಡ್‌ ನಲ್ಲಿ ಇಬ್ಬರು ಶಾಲಾ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ನಟ ಶ್ರೀಜಿತ್ ರವಿ ಅವರನ್ನು ಬಂಧಿಸಲಾಗಿದೆ.


46 ವರ್ಷದ ಶ್ರೀಜಿತ್ ರವಿ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಘಟನೆ ಕಳೆದ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಪಾಲಕ್ಕಾಡ್ ನಲ್ಲಿ ಕಾರಿನಿಂದಿಳಿದ ನಟ ಶ್ರೀಜಿತ್ ಇಬ್ಬರು ವಿದ್ಯಾರ್ಥಿನಿಯರ ಎದುರು ಅಶ್ಲೀಲವಾಗಿ ನಡೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!