ಟೋಕಿಯೋ : ಜಪಾನಿನ ಮಾಜಿ ಪ್ರಧಾನಿ ಶಿಂಜೊ ಅಬೆ ಪಶ್ಚಿಮ ಜಪಾನ್‌ನ ನಾರಾ ನಗರದಲ್ಲಿ ಭಾಷಣ ಮಾಡುವಾಗ ಅವರ ಮೇಲೆ ಶೂಟ್‌ ಮಾಡಿ ಕೊಲೆ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. 

ರಾಯಿಟರ್ಸ್ ಪ್ರಕಾರ, ಪಶ್ಚಿಮ ಜಪಾನ್‌ನ ನಾರಾ ನಗರದಲ್ಲಿ ಭಾಷಣ ಮಾಡುವಾಗ ಅವರ ಮೇಲೆ ಗುಂಡಿನ ದಾಳಿ ಮಾಡಲಾಗಿತ್ತು. ರಕ್ತದ ಮಡುವಿನಲ್ಲಿದ್ದ ಶಿಂಜೊ ಅಬೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಜಪಾನ್‌ನ ರಾಷ್ಟ್ರೀಯ ಮಾಧ್ಯಮ ಎನ್‌ಎಚ್‌ಕೆ ವರದಿ ಮಾಡಿದೆ.. ಆ ಸಮಯದಲ್ಲಿ ಗುಂಡೇಟಿನ ರೀತಿಯ ಶಬ್ದ ಕೇಳಿಸಿತು, ಈ ಸಂಬಂಧ ಶಂಕಿತನನ್ನು ಬಂಧಿಸಲಾಗಿದೆ ಎಂದು ಎನ್‌ಎಚ್‌ಕೆ ತಿಳಿಸಿದೆ. ಮೇಲ್ಮನೆ ಚುನಾವಣೆಗೆ ಮುನ್ನ ನಡೆದ ಕಾರ್ಯಕ್ರಮವೊಂದರಲ್ಲಿ ಮಾಜಿ ನಾಯಕ ಸಾರ್ವಜನಿಕವಾಗಿ ಭಾಷಣ ಮಾಡುತ್ತಿದ್ದಾಗ ಗುಂಡೇಟಿನ ಸದ್ದು ಕೇಳಿಬಂದಿದೆ ಎಂದು ರಾಷ್ಟ್ರೀಯ ಪ್ರಸಾರಕ ಎನ್‌ಎಚ್‌ಕೆ ಮತ್ತು ಕ್ಯೋಡೋ ಸುದ್ದಿ ಸಂಸ್ಥೆ ತಿಳಿಸಿದೆ. ಗುಂಡೇಟಿನ ಶಬ್ದ ಕೇಳಿದ ಬೆನ್ನಲ್ಲಿಯೇ ಶಿಂಜೋ ಅಬೆ ಕುಸಿದು ಬಿದ್ದಿದ್ದಾರೆ. ಈ ವೇಳೆ ಅವರ ಎದೆಯ ಭಾಗದ ಕಡೆಯಲ್ಲಿ ರಕ್ತ ಕಂಡುಬಂದಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!