ಮಂಗಳೂರು: ದಿಯಾ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ಅವರಿಗೆ ಮಾತೃ ವಿಯೋಗವಾಗಿದೆ. ಅವರ ತಾಯಿ ಸುಜಾತ ವೀರಪ್ಪ ಅಂಬಾರ್ ಅವರು ಅಲ್ಪಕಾಲ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ನಟ ಪೃಥ್ವಿ ಅಂಬಾರ್ ತುಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ದಿಯಾ ಸಿನಿಮಾದಿಂದ ಖ್ಯಾತಿ ಪಡೆದ ಇವರು, ಇತ್ತೀಚಿಗೆ ಶಿವರಾಜ್ ಕುಮಾರ್ ಜೊತೆ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಇವರ ಅಂತ್ಯಕ್ರಿಯೆ ಇಂದು ಮಂಗಳೂರಿನಲ್ಲಿ ನಡೆಯಲಿದೆ.

ದುರ್ಗಾಪರಮೇಶ್ವರಿ ಮಹಿಳಾ ಸಂಘದಲ್ಲಿ ತೊಡಗಿಸಿಕೊಂಡಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು

By admin

Leave a Reply

Your email address will not be published. Required fields are marked *

error: Content is protected !!