ಉಡುಪಿ: ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆಗೆ ಬಳಸಿದ ಬಿಳಿ ಬಣ್ಣದ ಇಯಾನ್ ಕಾರು ಪಡುಬಿದ್ರೆಯ ಇನ್ನಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಭಾನುವಾರ ಪತ್ತೆಯಾಗಿದೆ.

ಭಾನುವಾರ ಬೆಳಿಗ್ಗೆ ಸ್ಥಳೀಯರು ಉಡುಪಿ ಜಿಲ್ಲಾ ಪೋಲಿಸರಿಗೆ ಅಪರಿಚಿತ ಕಾರು ಇರುವ ಬಗ್ಗೆ ಮಾಹಿತಿ ನೀಡಿದ್ದು, ಪೋಲಿಸರು ಸ್ಥಳಕ್ಕೆ ತೆರಳಿ ಕಾರನ್ನು ಗಮನಿಸಿದಾಗ ಫಾಜಿಲ್ ಹತ್ಯೆಗೆ ಬಳಸಿದ ಕಾರು ಎಂಬುದು ತಿಳಿದಿದೆ

ಆರೋಪಿಗಳು ಕಾರನ್ನು ಸುರತ್ಕಲ್ ನಿಂದ ಪಡುಬಿದ್ರೆಯ ಇನ್ನಾಕ್ಕೆ ಆಗಮಿಸಿ ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

By admin

Leave a Reply

Your email address will not be published. Required fields are marked *

error: Content is protected !!