ರಶ್ಮಿಕಾ ಮಂದಣ್ಣ (Rashmika Mandanna) ಅವರು ಈಗ ಗೆಲ್ಲುವ ಕುದರೆ ಆಗಿದ್ದಾರೆ. ಅವರು ಯಾವುದಾದರೂ ಚಿತ್ರಕ್ಕೆ ನಾಯಕಿ ಆದರೆ ಚಿತ್ರ ಶೇ.50 ಗೆದ್ದಂತೆ ಎಂಬ ನಂಬಿಕೆ ನಿರ್ಮಾಪಕರಲ್ಲಿ ಮೂಡಿದೆ. ಇದೇ ಕಾರಣಕ್ಕೋ ಏನೋ ಅವರಿಗೆ ಹಲವು ಪ್ರಾಜೆಕ್ಟ್ಗಳು ಬರುತ್ತಿವೆ. ಆದರೆ, ರಶ್ಮಿಕಾ ಮಂದಣ್ಣ ಸಿಕ್ಕ ಎಲ್ಲಾ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಈಗ ರಶ್ಮಿಕಾ ಮಂದಣ್ಣ ಅವರು ಬಾಲಿವುಡ್ನ ಮತ್ತೋರ್ವ ಸ್ಟಾರ್ ಹೀರೋನ ಚಿತ್ರಕ್ಕೆ ನಾಯಕಿ ಆಗುತ್ತಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಒಂದೇ ಬಾಕಿ ಇದೆ. ಇದು ರಶ್ಮಿಕಾ ಮಂದಣ್ಣ ಒಪ್ಪಿಕೊಂಡಿರುವ ನಾಲ್ಕನೇ ಬಾಲಿವುಡ್ ಸಿನಿಮಾ (Bollywood Movie) ಅನ್ನೋದು ವಿಶೇಷ.

ರಶ್ಮಿಕಾ ಮಂದಣ್ಣ ಅವರು ಕನ್ನಡದಿಂದ ಬಣ್ಣದ ಬದುಕು ಆರಂಭಿಸಿದರು. ಅವರು ಚಿತ್ರರಂಗಕ್ಕೆ ಬಂದು ಕೇವಲ 6 ವರ್ಷಗಳಾಗಿವೆ. ಆಗಲೇ ಅವರು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ. ತೆಲುಗು, ತಮಿಳು ಹಾಗೂ ಬಾಲಿವುಡ್​ನಲ್ಲಿ ಬೇಡಿಕೆಯ ನಟಿ ಆಗಿ ಹೊರಹೊಮ್ಮಿದ್ದಾರೆ. ‘ಮಿಷನ್ ಮಜ್ನು’ ಹಾಗೂ ‘ಗುಡ್​ಬೈ’ ಚಿತ್ರಗಳಲ್ಲಿ ರಶ್ಮಿಕಾ ನಟಿಸಿದ್ದು, ಈ ಚಿತ್ರಗಳು ರಿಲೀಸ್​ಗೆ ರೆಡಿ ಇದೆ. ‘ಮಿಷನ್ ಮಜ್ನು’ ಚಿತ್ರಕ್ಕೆ ಸಿದ್ದಾರ್ಥ್ ಮಲ್ಹೋತ್ರಾ ಹೀರೋ. ‘ಗುಡ್​ಬೈ’ ಚಿತ್ರದಲ್ಲಿ ಅಮಿತಾಭ್ ಬಚ್ಚನ್​ ಜತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ.

ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಚಿತ್ರದಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಈಗಾಗಲೇ ಆರಂಭಗೊಂಡಿದೆ. ಇವುಗಳ ಮಧ್ಯೆ ಅವರು ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಬಾಲಿವುಡ್ನಲ್ಲಿ ಛಾಪು ಮೂಡಿಸಿರುವ ಕಾರ್ತಿಕ್ ಆರ್ಯನ್ ಚಿತ್ರಕ್ಕೆ ರಶ್ಮಿಕಾ ನಾಯಕಿ ಎಂಬ ಸುದ್ದಿ ಕೇಳಿ ಬಂದಿದೆ.

By admin

Leave a Reply

Your email address will not be published. Required fields are marked *

error: Content is protected !!