• ಮಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಎಲ್ಲಾ ಶಾಲಾ – ಕಾಲೇಜುಗಳಿಗೆ ಸೆ. 2ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶಿದ್ದಾರೆ.

    ಸೆ.2 ರಂದು ಮಂಗಳೂರು ನಗರದ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಗಣಪತಿವಿಗ್ರಹದ ವಿಸರ್ಜನೆಯ ಶೋಭಾಯಾತ್ರೆ ಕಾರ್ಯಕ್ರಮಗಳು ನಡೆಯುವುದರಿಂದ, ಈ ಸಮಯದಲ್ಲಿ ಹಚ್ಚಿನ ಜನದಟ್ಟಣೆ ಹಾಗೂ ವಾಹನ ದಟ್ಟಣೆ ಜಾಸ್ತಿಯಾಗುವ ಸಂಭವವಿರುತ್ತದೆ ಎಂದು ಪೊಲೀಸ್‌ ಇಲಾಖೆಯ ಮಾಹಿತಿಯಂತೆ ತಿಳಿದುಬಂದಿದೆ.ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆಗಳಿರುವುದರಿಂದ ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಸ್ನಾತಕೊತ್ತರ ಪದವಿ, ಡಿಪ್ಲೋಮ, ಐ.ಟಿ.ಐ.ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಸೆ. 2 ರಂದು ರಜೆಯನ್ನು ಘೋಷಿಸುವಂತೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಪ್ರಸ್ತುತ ನೀಡಿರುವ ರಜೆ ಅವದಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಂಡು ನಿರ್ವಹಿಸುವಂತೆ ತಿಳಿಸಲಾಗಿದೆ.ಇದಲ್ಲದೆ ಸೆ. 2ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 1.00ಕ್ಕೆ ಮಂಗಳೂರಿನಲ್ಲಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. ಅಲ್ಲದೆ ನಗರದ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಮಾವೇಶ ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!