ಸೆ.2ರಂದು ಪ್ರಧಾನಿ ಮೋದಿ ಭಾಗವಹಿಸುವ ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದ ಕಾರ್ಯಕ್ರಮದ ಯಶಸ್ಸಿಗೆ ದ.ಕ.ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಹಿತ ಸುಮಾರು ಒಂದುವರೆ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಕೆಲವು ಫಲಾನಭವಿಗಳಿಗೆ ಯೋಜನೆಗಳ ಹಸ್ತಾಂತರ ನಡೆಯಲಿದೆ. ಮಧ್ಯಾಹ್ನ 1ಕ್ಕೆ ಕಾರ್ಯಕ್ರಮ ನಡೆಯಲಿರುವುದರಿಂದ ಸಾರ್ವಜನಿಕರು ಮುಂಚಿತವಾಗಿ ಭಾಗವಹಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.

ಫಲಾನುಭವಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ನಿರ್ದೇಶನ ನೀಡಿಲ್ಲ. ಆದರೆ ಮನವಿ ಮಾಡಲಾಗಿದೆ. ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾತನಾಡಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಯಾವುದೇ ಆಕ್ಷೇಪಾರ್ಹ ವಸ್ತುಗಳನ್ನು ತರುವಂತಿಲ್ಲ. ಕಮಿಷನರೆಟ್ ವ್ಯಾಪ್ತಿಯ 9 ಜಂಕ್ಷನ್‌ಗಳಲ್ಲಿ‌ ಸಂಚಾರ ಮಾರ್ಗ ಬದಲಿಸಲಾಗುತ್ತದೆ. 15 ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದೆ. ಸಿಎಆರ್, ಕೆಎಸ್ಸಾರ್ಪಿ, ಹೋಮ್‌ಗಾರ್ಡ್ ಸಹಿತ ವಿವಿಧ ಘಟಕಗಳ ಅಧಿಕಾರಿ, ಸಿಬ್ಬಂದಿಗಳನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗುತ್ತದೆ ಎಂದು ಹೇಳಿದರು.

By admin

Leave a Reply

Your email address will not be published. Required fields are marked *

error: Content is protected !!