ಮುಜಾಫರ್‌ನಗರ: ಶಾಮ್ಲಿ ಜಿಲ್ಲೆಯಲ್ಲಿ ಆರು ವರ್ಷದ ಬಾಲಕಿ ಮೇಲೆ ಆಕೆಯ ನೆರೆಮನೆಯ 60 ವರ್ಷದ ವ್ಯಕ್ತಿಯೇ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಒಪಿ ಸಿಂಗ್ ತಿಳಿಸಿದ್ದಾರೆ.

ಬಾಲಕಿಯ ಚಿಕ್ಕಪ್ಪ ನೀಡಿರುವ ದೂರಿನ ಪ್ರಕಾರ, ಸೋಮವಾರ ರಾತ್ರಿ ಆರೋಪಿ ಅಪ್ರಾಪ್ತೆಯನ್ನು ಟೋಪಿ ಕೊಡುವ ನೆಪದಲ್ಲಿ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿಸಿದ್ದಾರೆ

ಈ ವೇಳೆ ಬಾಲಕಿಯ ಚೀರಾಟ ಕೇಳಿ ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿದರಾದರೂ, ಅಷ್ಟೊತ್ತಿಗಾಗಲೇ ಆರೋಪಿ ಪರಾರಿಯಾಗಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!