ಮಂಗಳೂರು: ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾದ ಘಟನೆ ಮಂಗಳೂರಿನ ಮಾಲ್ ಒಂದರಲ್ಲಿ ನಡೆದಿದೆ.

ಕಳೆದ ಎರಡು ದಿನಗಳಿಂದ ಎಲ್ಲಿ ನೋಡಿದರೂ ಕಾಂತಾರ ಅಬ್ಬರ ಜೋರಾಗಿದೆ. ಈ ಮಧ್ಯೆ ಸಿನಿಮಾದ ಕ್ಲೈಮಾಕ್ಸ್ ನೋಡುತ್ತಿದ್ದಂತೆ ದೈವ ಮೈಮೇಲೆ ಬಂದಂತೆ ಮಹಿಳೆ ವರ್ತಿಸಿದ್ದಾರೆ ಎಂದು ತಿಳಿದುಬಂದಿದೆ.

ಮಹಿಳೆಯ ವರ್ತನೆ ಕಂಡು ಅಲ್ಲಿ ನೆರೆದಿದ್ದ ಜನ ಭಯಬೀತಗೊಂಡಿದ್ದಾರೆ. ವಿಡಿಯೋ ಮಾಡುವುದಕ್ಕೂ ಸಹ ಹೆದರಿಕೊಂಡಿದ್ದಾರೆ ಎನ್ನಲಾಗಿದೆ.

ವಿಚಾರ ಇದೀಗ ಸೋಷಿಯಲ್​ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗುತ್ತಿದೆ. ಕೆಲ ನಿಮಿಷಗಳ ಬಳಿಕ ಮಹಿಳೆ ಶಾಂತಗೊಂಡಿದ್ದಾರಂತೆ.

ಸಿನಿಮಾ ಮುಗಿಸಿ ಬಳಿಕ ದೇವಸ್ಥಾನಕ್ಕೆ ತೆರಳಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ಸಿನಿಮಾದ ಕ್ಲೈಮ್ಯಾಕ್ಸ್ ನ 15 ರಿಂದ 20 ನಿಮಿಷ ಪ್ರೇಕ್ಷಕರನ್ನು ನಿಬ್ಬೆರಗಾಗಿಸುವಂತೆ ದೃಶ್ಯಗಳನ್ನು ಚಿತ್ರೀಕರಿಸಿಲಾಗಿದೆ.

By admin

Leave a Reply

Your email address will not be published. Required fields are marked *

error: Content is protected !!