ಉಡುಪಿ: ಸ್ಯಾಂಡಲ್ ವುಡ್‌ನ ಖ್ಯಾತ ನಟ ರಮೇಶ್ ಅರವಿಂದ್ ಉಡುಪಿಯಲ್ಲಿ ಬಡಗು ತಿಟ್ಟಿನ ಯಕ್ಷಗಾನ ವೇಷದಲ್ಲಿ ಪೋಟೋ ಶೂಟ್ ಮಾಡಿಸಿಕೊಂಡು ಖುಷಿಪಟ್ಟಿದ್ದಾರೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಇವರ ವಿಡಿಯೋ ವೈರಲ್ ಆಗುತ್ತಿದೆ. ಛಾಯಾಗ್ರಾಹಕ ಉಡುಪಿಯ ಫೋಕಸ್ ರಾಘು ಅವರ ಹೋಮ್ ಸ್ಟೇ ನಲ್ಲಿ ಯಕ್ಷಾವತಾರದಲ್ಲಿ ನಟ ರಮೇಶ್ ಯಕ್ಷ ರೂಪದಲ್ಲಿ ಸುಂದರವಾಗಿ ಕಾಣಿಸಿಕೊಂಡಿದ್ದಾರೆ.

ಯಕ್ಷಗಾನದ ವೇಷ ತೊಟ್ಟ ನನ್ನಲ್ಲೀಗ ದಿವ್ಯತೆಯ ಭಾವ ಬೆಳೆದಿದೆ. 8 ಅಡಿ, 150 ಕೆ.ಜಿ ಬೆಳೆದವನಂತೆ ಅನಿಸುತ್ತಿದೆ. ನಾನಿವತ್ತು ಬಹಳವೇ ಶಕ್ತಿ ಶಾಲಿ, ಎದುರಿಗೇನಾದರೂ ರಾಕ್ಷಸರು ಬಂದರೆ ಹೊಡೆದುರುಳಿಸಿ ಬಿಡುತ್ತೇನೆ” ಎಂದು ಸಂತಸ ಹಂಚಿಕೊಂಡಿದ್ದಾರೆ. ಅಲ್ಲದೆ ಯಕ್ಷಗಾನ ಕಲಾವಿದರ ಬಗ್ಗೆ ತುಂಬುಹೃದಯದಿಂದ ಅಭಿಮಾನವನ್ನು ವ್ಯಕ್ತಪಡಿಸಿರುವ ಅವರು, ಕರಾವಳಿಯ ಭಾಗವತರು, ಹಿಮ್ಮೇಳ ಹಾಗೂ ಮುಮ್ಮೇಳ ಕಲಾವಿದರೆಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುವುದಾಗಿ ರಮೇಶ್ ಹೇಳಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!