ಕುಂದಾಪುರ: ಪ್ರೌಢಶಾಲಾ ಬಾಲಕಿಯೋರ್ವಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಕುಂದಾಪುರದಲ್ಲಿ ನಡೆದಿದೆ.

ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹಾಗೂ ಪ್ರೌಢಶಾಲೆ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಅನುಶ್ರೀ ಮೃತ ದುರ್ದೈವಿ.

ಈಕೆ ಎಂಟನೇ ತರಗತಿ ವಿದ್ಯಾರ್ಥಿನಿಯಾಗಿದ್ದು ನಿನ್ನೆ ಮನೆಯಲ್ಲಿ ಓದುತ್ತಿದ್ದಂತೆ ಕುಸಿದು ಬಿದ್ದು ಪ್ರಜ್ಞಾಹೀನಳಾಗಿದ್ದಳು. ತಕ್ಷಣವೇ ಈಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಅಷ್ಟರಲ್ಲಾಗಲೇ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ಮಣಿಪಾಲ ಆಸ್ಪತ್ರೆಯಲ್ಲಿ ಈಕೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

By admin

Leave a Reply

Your email address will not be published. Required fields are marked *

error: Content is protected !!