ಬೆಳ್ತಂಗಡಿ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಮಿಂಚಿನ ಕಾರ್ಯಚರಣೆ ನಡೆಸಿ ಜಾನುವಾರುಗಳನ್ನು ರಕ್ಷಣೆ ಮಾಡಿ ಇಬ್ಬರು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪುದುವೆಟ್ಟು ಬಳಿಯ ಬಾಯಿತರು ಎಂಬಲ್ಲಿ ನಡೆದಿದೆ.

ಆರೋಪಿಗಳು ಕಾಯರ್ತಡ್ಕದಿಂದ ಅಣಿಯೂರಿಗೆ ಪಿಕಪ್ ನಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು 6 ಜಾನುವಾರುಗಳನ್ನು ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಾದ ಆಜೀದ್ ಕಕ್ಕಿಂಜೆ, ರಫೀಕ್ ನೆರಿಯ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಶಪಡಿಸಿಕೊಂಡ ಧರ್ಮಸ್ಥಳ ಠಾಣೆಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!