ಸುಳ್ಯ: ಪುಟ್ಟ ಬಾಲಕನೋರ್ವ ಹೃದಯಾಘಾತದಿಂದ ದಾರುಣವಾಗಿ ಮೃತಪಟ್ಟ ಘಟನೆ ಸುಳ್ಯದ ಅಮರಮುಡ್ನೂರು ಗ್ರಾಮದಲ್ಲಿ ನಡೆದಿದೆ. ಅಮರಮುಡ್ನೂರು ತಾಲೂಕಿನ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2 ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್ ಕೆ.ಸಿ. ಹೃದಯಾಘಾತಕ್ಕೆ ಬಲಿಯಾದ ಬಾಲಕ.

ಶಾಲೆಗೆ ಹೋಗಿದ್ದ ಬಾಲಕನಿಗೆ ಮಧ್ಯಾಹ್ನದ ವೇಳೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ದೂರವಾಣಿ ಮೂಲಕ ಜ್ವರ ಇರುವ ಬಗ್ಗೆ ಪೋಷಕರಿಗೆ ತಿಳಿಸಿದ್ದರು ಎನ್ನಲಾಗಿದೆ. ಬಾಲಕನ ತಂದೆ ಶಾಲೆಗೆ ಬಂದಿದ್ದು ಆ ಸಂದರ್ಭದಲ್ಲೇ ಬಾಲಕ ನಿಂತಲ್ಲಿಯೇ ಕುಸಿದು ಬಿದ್ದಿರುತ್ತಾನೆ. ತಕ್ಷಣ ಶಿಕ್ಷಕರು ಹಾಗೂ ಸ್ಥಳೀಯರು ಸೇರಿ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದರು.

ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿದಾಗ ಬಾಲಕನಿಗೆ ಹೃದಯಾಘಾತ ಸಂಭವಿಸಿದ್ದರಿಂದ ಮೃತಪಟ್ಟಿರುವುದಾಗಿ ತಿಳಿಸಿದರೆಂದು ತಿಳಿದು ಬಂದಿದೆ. ಬಾಲಕನ ತಂದೆ ಚಂದ್ರಶೇಖರ ಆಚಾರ್ಯ ಕುಂಟಿಕಾನ ಅದೇ ಶಾಲೆಯ ಎಸ್.ಡಿ.ಎಂ.ಸಿ.ಉಪಾಧ್ಯಕ್ಷರಾಗಿದ್ದು,ತಾಯಿ ಗೀತಾ ಮತ್ತು ಓರ್ವ ಸಹೋದರ ಅಕ್ಷಯ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾನೆ.

By admin

Leave a Reply

Your email address will not be published. Required fields are marked *

error: Content is protected !!