ಬಂಟ್ವಾಳ ತಾಲೂಕು ಕಚೇರಿಯಲ್ಲಿ ಶಿರಸ್ತೇದಾರರಾಗಿದ್ದ ಶ್ರೀದರ್ ಕೆ ಕಳೆದ ಕೋವಿಡ್ ಸಂಧರ್ಭದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದು ಸರಕಾರದಿಂದ ನೀಡಲಾದ ಪರಿಹಾರಧನ ರೂ. 30,00,000 (ರೂ. ಮೂವತ್ತು ಲಕ್ಷ) ಚೆಕ್ಕನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಶಾಸಕರ ಕಚೇರಿಯಲ್ಲಿ ಶುಕ್ರವಾರ ಶ್ರೀದರ್ ಅವರ ಪತ್ನಿ ನಳಿನಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಡಾ.ಸ್ಮಿತಾ ರಾಮು ಉಪಸ್ಥಿತರಿದ್ದರು.