ಬೆಳ್ಳಾರೆ ಬಿಜೆಪಿಯ ಯುವ ನಾಯಕ ಪ್ರವೀಣ್ ನೆಟ್ಟಾರು, ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪಿಎಫ್ ಐ ಸಂಘಟನೆಯ ನಾಲ್ವರಿಗೆ ಲುಕ್ ಔಟ್ ನೊಟೀಸ್ ಜಾರಿ ಮಾಡಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಲುಕ್ ಔಟ್ ಜಾರಿಯಾಗಿರುವ ನಾಲ್ವರ ಪತ್ತೆಗಾಗಿ ಪುತ್ತೂರು , ಸುಳ್ಯ , ಬೆಳ್ಳಾರೆ ಸಹಿತ ಬಸ್ ನಿಲ್ದಾಣ , ರೈಲು ನಿಲ್ದಾಣ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳ ಭಾವಚಿತ್ರ ಇರುವ ಪೋಸ್ಟರ್ ಅಂಟಿಸಿ ಪತ್ತೆಗೆ ಸಹಕರಿಸಲು ಮನವಿ ಮಾಡಿದ್ದಾರೆ. ಅಲ್ಲದೆ ನಾಲ್ವರ ಪತ್ತೆಗೆ ಎನ್ಐಎ ಶೋಧ ತಂತ್ರಜ್ಞಾನ ಆಧಾರಿತ ಮಾಹಿತಿ ಆಧಾರದಲ್ಲಿ ಪುತ್ತೂರಿನ ಹಲವೆಡೆ ಕಾರ್ಯಾಚರಣೆ ನಡೆಸಿದ್ದಾರೆ

ಸುಳ್ಯ ತಾಲೂಕು ಬೆಳ್ಳಾರೆಯ ಬೂಡು ನಿವಾಸಿ ಮಹಮ್ಮದ್ ಮುಸ್ತಫಾ, ಮಡಿಕೇರಿ ನಿವಾಸಿ ತುಫೈಲ್ ಎಂ. ಎಚ್., ಸುಳ್ಯ ತಾಲೂಕು ಕಲ್ಲನೊಟ್ಟು ನಿವಾಸಿ ಉಮ್ಮರ್ ಫಾರೂಕ್ ಹಾಗೂ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಅಬೂಬಕ್ಕರ್ ಸಿದ್ದಿಕ್ ಯಾನೆ ಪೈಂಟರ್ ಸಿದ್ದಿಕ್‌ರವರ ಪತ್ತೆಗೆ ನೊಟೀಸ್ ಜಾರಿ‌ ಮಾಡಲಾಗಿದೆ. ಮಹಮ್ಮದ್ ಮುಸ್ತಫಾ ಹಾಗೂ ತುಫೈಲ್ ಎಂ.ಎಚ್. ಪತ್ತೆಗೆ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿದ್ದು ಉಳಿದಿಬ್ಬರ ಪತ್ತೆಗೆ ತಲಾ 2 ಲಕ್ಷ ರೂ. ಬಹುಮಾನ ಪ್ರಕಟಿಸಲಾಗಿದೆ. ಎನ್‌ಐಎ ಕಚೇರಿಯ ಬೆಂಗಳೂರು ಘಟಕದ ಪೊಲೀಸ್ ಅಧೀಕ್ಷಕರ ಕಚೇರಿಗೆ 080-29510900 ಮಾಹಿತಿ ನೀಡಬಹುದು ಎಂದು ಎನ್‌ಐಎ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

By admin

Leave a Reply

Your email address will not be published. Required fields are marked *

error: Content is protected !!