ಬೆಂಗಳೂರು : ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಬಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಗ್ರಾಮದ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಯಲಹಂಕ ತಾಲೂಕಿನ ತಿಂಡ್ಲು ಗ್ರಾಮದ ಮಂಜುನಾಥ್ (24) ಹಾಗೂ ನಿಖಿಲ್ (19) ಮೃತರು.

ಇವರು ಬೈಕ್​​ನಲ್ಲಿ ಗೌರಿಬಿದನೂರು ಕಡೆಯಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದರು.

ಮುಂದಿನ ವಾಹನವನ್ನ ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಖಾಸಗಿ ಬಸ್​ಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

By admin

Leave a Reply

Your email address will not be published. Required fields are marked *

error: Content is protected !!