ಮಂಗಳೂರು, ನ.22: ರಾಷ್ಟ್ರೀಯ ಹೆದ್ದಾರಿ 75ರ ಪಂಪ್ ವೆಲ್ ಸಮೀಪದ ನಾಗುರಿ ಎಂಬಲ್ಲಿ ಕಳೆದ ಶನಿವಾರ ಸಂಜೆ ಆಟೊ ರಿಕ್ಷಾದಲ್ಲಿ ಸ್ಫೋಟ ಸಂಭವಿಸಿದ ಸ್ಥಳಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಪೂರ್ವಾಹ್ನ 11 ಗಂಟೆ ಸುಮಾರಿಗೆ ಭೇಟಿ ನೀಡಿದರು.

ಈ ವೇಳೆ ಸ್ಫೋಟ ಸಂಭವಿಸಿದ ಆಟೋ ರಿಕ್ಷಾವನ್ನು ಪರಿಶೀಲಿಸಿ, ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಈ ವೇಳೆ ಶಾಸಕ ಭರತ್ ಶೆಟ್ಟಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಐಜಿಪಿ ಪ್ರವೀಣ್ ಸೂದ್, ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಶನಿವಾರ ಸಂಜೆ ಸಂಭವಿಸಿದ ಈ ಸ್ಫೋಟದಲ್ಲಿ, ಆರೋಪಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಮುಹಮ್ಮದ್ ಶಾರಿಕ್(24) ಹಾಗೂ ಆಟೊ ರಿಕ್ಷಾ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!