Month: December 2022

ರೂಪೇಶ್ ಶೆಟ್ಟಿ ಬಿಗ್ ಬಾಸ್ ಸೀಸಾನ್-9ರ ವಿನ್ನರ್-ಕರಾವಳಿಗೆ ಹೊಸವರ್ಷಕ್ಕೆ ಸಂಭ್ರಮದ ಉಡುಗೊರೆ

ತುಳುನಾಡಿನ ಅಪಾರ ಅಭಿಮಾನಿಗಳ ಆಸೆ ಈಡೇರಿದೆ. ೨೦೨೩ಕ್ಕೆ ಅದ್ದೂರಿ ಸ್ವಾಗತ ಕೋರುವ ಜೊತೆ ಜೊತೆಗೆ ಕರಾವಳಿಯ ಕುವರ ತುಳು ಚಿತ್ರರಂಗದ ಪ್ರತಿಭಾವಂತ ನಾಯಕ ನಟ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಬಿಗ್ ಬಾಸ್ ಸೀಸನ್ ೯ರ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ.…

ಕಾಸರಗೋಡು: ಖಾಸಗಿ ಬಸ್ ಡಿಕ್ಕಿ-3 ವರ್ಷದ ಮಗು ಮೃತ್ಯು

ಕಾಸರಗೋಡು, ಖಾಸಗಿ ಬಸ್ಸು ಡಿಕ್ಕಿ ಹೊಡೆದು ಮಗು ಮೃತಪಟ್ಟ ಘಟನೆ ಚೆರ್ಕಳದಲ್ಲಿ ಶನಿವಾರ ಸಂಜೆ ನಡೆದಿದೆ. ಸೀತಾಂಗೋಳಿಯ ಆಶಿಕ್ ಮತ್ತು ಸುಬೈದಾ ದಂಪತಿ ಪುತ್ರ ಅಬ್ದುಲ್ ವಾಹಿದ್ (3) ಮೃತಪಟ್ಟಿದ್ದು, ಮಗುವಿನ ಜೊತೆಗಿದ್ದ ತಾಯಿ ಸುಬೈದಾ ಗಾಯ ಗೊಂಡಿದ್ದಾರೆ. ಚೆರ್ಕಳ ಬಸ್ಸು…

ಬಹುತೇಕ ರೂಪೇಶ್ ಶೆಟ್ಟಿ ಬಿಗ್ ಬಾಸ್ ವಿನ್ನರ್? ಅಧಿಕೃತ ಘೋಷನೆಗಾಗಿ ಎದುರು ನೋಡುತ್ತಿದ್ದಾರೆ ಕರಾವಳಿಗರು

ಬಿಗ್ ಬಾಸ್ ಸೀಸನ್ 9ರ ವಿಜೇತರು ಯಾರು ಎನ್ನುವುದು ಇನ್ನು ಕೆಲವೇ ಗಂಟೆಗಳಲ್ಲಿ ಘೋಷಣೆ ಆಗಲಿದೆ. ಅದಕ್ಕೂ ಮುನ್ನ ಸೋಷಿಯಲ್ ಮೀಡಿಯಾದಲ್ಲಿ ಹಲವು ಹೆಸರುಗಳು ಕೇಳಿ ಬರುತ್ತಿವೆ. ಗ್ರ್ಯಾಂಡ್ ಫಿನಾಲೆ ವೇದಿಕೆ ಹತ್ತಿದ್ದ ಐದು ಸ್ಪರ್ಧಿಗಳಲ್ಲಿ ದಿವ್ಯಾ ಉರುಡುಗ, ರೂಪೇಶ್ ರಾಜಣ್ಣ…

ಸುಬ್ರಮಣ್ಯ:ಗೂಡ್ಸ್ ರೈಲಿನಿಂದ ಗ್ಯಾಸ್ ಸೋರಿಕೆ-ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

ಸುಬ್ರಹ್ಮಣ್ಯ: ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಕಾಣಿಸಿಕೊಂಡಿದ್ದು ಲೋಕೊಪೈಲಟ್ ಸಮಯಪ್ರಜ್ಞೆಯಿಂದಾಗಿ ಭಾರಿ ಅನಾಹುತವೊಂದು ತಪ್ಪಿದ ಘಟನೆ ಕುಕ್ಕೆ ಸುಬ್ರಮಣ್ಯ ರೋಡ್ (ನೆಟ್ಟಣ) ರೈಲ್ವೇ ನಿಲ್ದಾಣದಲ್ಲಿ ಇಂದು ನಸುಕಿನ ಜಾವ ನಡೆದಿದೆ. ಸುಳ್ಯ,ಬೆಳ್ತಂಗಡಿ,ಮಂಗಳೂರು,ಪುತ್ತೂರು, ಅಗ್ನಿಶಾಮಕ ದಳದ ತಂಡದ ನಾಲ್ಕು ಅಗ್ನಿ ಶಮನ ಯಂತ್ರಗಳು ಹಾಗೂ ರೈಲ್ವೇ ಇಲಾಖೆಯ ಸಹಕಾರದೊಂದಿಗೆ ಅನಿಲ ಸೋರಿಕೆಯನ್ನು ತಡೆಯುವ ಕಾರ್ಯಚರಣೆ ನಡೆದಿದೆ. ಮಂಗಳೂರಿನಿಂದ ಮಹರಾಷ್ಟ್ರಕ್ಕೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ರೈಲು ಸುಬ್ರಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ರಾತ್ರಿ ಗಂಟೆ 2.30ರ ಸುಮಾರಿಗೆಕ್ರಾಸಿಂಗ್‌ಗಾಗಿ ನಿಲ್ಲಿಸಲಾಗಿತ್ತು. ಈ ಸಮಯದಲ್ಲಿ ಲೋಕೊಪೈಲೆಟ್ ಕೆಳಗಿಳಿದಾಗ ಸುಮಾರು 43 ಗೂಡ್ಸ್ ಪ್ಯಾನೆಲ್‌ಗಳ ಪೈಕಿ ನಾಲ್ಕನೇ ಟ್ಯಾಂಕ್‌ನಿಂದ ಅನಿಲ ಸೋರಿಕೆಯಾಗುತ್ತಿರುವುದು ತಿಳಿದು ಬಂದಿದೆ.ತಕ್ಷಣವೇ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ರೈಲ್ವೇ ನಿಲ್ದಾಣದಿಂದ ಪುತ್ತೂರುಅಗ್ನಿಶಾಮಕದಳಕ್ಕೆ ಬಂದ ಕರೆಯಂತೆ ರಾತ್ರೋ ರಾತ್ರಿ ನೆಟ್ಟಣಕ್ಕೆ ತೆರಳಿದ ಕಾರ್ಯಾಚರಣೆ ನಡೆಸಿದರು. ಅನಿಲ ಸೋರಿಕೆಯಾದಲ್ಲಿ ಹೆಚ್ಚಿನ…

ಮೂಗಿನ ಸಮಸ್ಯೆ ಎಂದು ಆಸ್ಪತ್ರೆಗೆ ದಾಖಲಾದ ಯುವತಿ ಮನೆ ಸೇರಿದ್ದು ಮಾತ್ರ ಶವವಾಗಿ

ರಾಯಚೂರು: ಮೂಗಿನಲ್ಲಿ ಏನೋ ಸಮಸ್ಯೆಇದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆರಾಯಚೂರಿನಲ್ಲಿ ನಡೆದಿದೆ. ಮೃತ ಯುವತಿಯನ್ನು ರಾಯಚೂರು ನಗರದರಾಜೇಶ್ವರಿ (18) ಎಂದು ಗುರುತಿಸಲಾಗಿದೆ ಈಕೆಯ ಕುಟುಂಬಸ್ಥರು ರಾಯಚೂರು ನಗರದಕಿಮ್ಸ್ ಆಸ್ಪತ್ರೆ ವೈದ್ಯ ಡಾ.ರಾಜಶೇಖರ್ಪಾಟೀಲ್ ನಿರ್ಲಕ್ಷ್ಯದಿಂದಲೇ ಬಾಲಕಿಸಾವನ್ನಪಿರುವುದಾಗಿ ಆರೋಪ ಮಾಡುತ್ತಿದ್ದು,ಆಸ್ಪತ್ರೆಯ ಮುಂದೆಯೇ ಪ್ರತಿಭಟನೆನಡೆಸಿದ್ದಾರೆ.…

ಇಂದು ರಾತ್ರಿ 10ಕ್ಕೆ ಸೌಂಡ್ ಬಂದ್: 12:30ಕ್ಕೆ ಪಾರ್ಟಿ ಕ್ಲೋಸ್-ಕಮಿಷನರ್ ಖಡಕ್ ವಾರ್ನಿಂಗ್

ಮಂಗಳೂರು ನಗರದಾದ್ಯಂತ ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹೊಸ ವರ್ಷದ ಪಾರ್ಟಿ ಆಯೋಜಿಸುವವರು ಡಿ.31ರಂದು 12:30ಕ್ಕೆ ಕಾರ್ಯಕ್ರಮ ಮುಗಿಸಬೇಕು. ಅನುಮತಿ ಪಡೆದಿದ್ದರೂ ರಾತ್ರಿ 10 ಗಂಟೆಗೆ…

ವ್ಯಾಟಿಕನ್: ಅನಾರೋಗ್ಯದಿಂದ ವಿಶ್ರಾಂತ ಪೋಪ್ ಬೆನೆಡಿಕ್ಟ್ XVI ದೈವಾದೀನ

ವ್ಯಾಟಿಕನ್, ವಿಶ್ರಾಂತ ಪೋಪ್ ಬೆನೆಡಿಕ್ಟ್ XVI ಅವರು ಅವರು ಅನಾರೋಗ್ಯದಿಂದ ವ್ಯಾಟಿಕನ್ ನಿವಾಸದಲ್ಲಿ ದೈವಾದೀನರಾಗಿದ್ದಾರೆ. ವಿಶ್ರಾಂತ ಪೋಪ್, ಬೆನೆಡಿಕ್ಟ್ XVI, ಅವರು ಇಂದು 9:34 ಕ್ಕೆ ವ್ಯಾಟಿಕನ್‌ನ ಮೇಟರ್ ಎಕ್ಲೇಸಿಯಾ ಮಠದಲ್ಲಿ ನಿಧನರಾದರು ಎಂದು ವ್ಯಾಟಿಕನ್ ವಾರ್ತೆ ಮಾಹಿತಿ ಹಂಚಿಕೊಂಡಿದೆ. ವಿಶ್ರಾಂತರು…

ಬಸ್ ಚಾಲಕನಿಗೆ ಹಾರ್ಟ್ ಅಟ್ಯಾಕ್-ಚಲಿಸುತ್ತಿದ್ದ ಬಸ್ ಕಾರಿಗೆ ಡಿಕ್ಕಿ-9 ಮಂದಿ ಸ್ಥಳದಲ್ಲೇ ಸಾವು

ಗುಜರಾತ್, ಎಸ್‌ಯುವಿ ವಾಹನಕ್ಕೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನರು ಸಾವನ್ನಪ್ಪಿ ಸುಮಾರು 15 ಮಂದಿ ಗಾಯಗೊಂಡ ಘಟನೆ ಗುಜರಾತ್‌ನ ನವ್ಸಾರಿ ಜಿಲ್ಲೆಯ ಹೆದ್ದಾರಿ ಬಳಿ ಶನಿವಾರ ಮುಂಜಾನೆ ನಡೆದಿದೆ. ಬಸ್ ವಲ್ಸಾದ್ ಕಡೆಗೆ ಹೋಗುತ್ತಿದ್ದಾಗ ವೆಸ್ಮಾ ಗ್ರಾಮದ ಬಳಿ…

ಕುಂದಾಪುರ: ಶಬರಿಮಲೆ ಯಾತ್ರೆ ಮುಗಿಸಿ ಮರಳುತ್ತಿದ್ದ ಭಕ್ತ ಬಸ್ ಮೇಲಿಂದ ಬಿದ್ದು ಮೃತ್ಯು

ಕುಂದಾಪುರ: ಶಬರಿಮಲೆ ಯಾತ್ರೆ ಮುಗಿಸಿ ಬಂದು, ಆನೆಗುಡ್ಡೆ ದೇವಸ್ಥಾನದ ಬಳಿ ನಿಲ್ಲಿಸಿದ ಬಸ್ಸಿನ ಟಾಪ್ ನಲ್ಲಿ ಮಲಗಿದ್ದ ವ್ಯಕ್ತಿ ಆಕಸ್ಮಿಕವಾಗಿ ಬಸ್ಸಿನ ಮೇಲಿಂದ ಕೆಳಕ್ಕೆ ಬಿದ್ದು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಬೆಂಗಳೂರು ಕುಂಬಾರಪೇಟೆಯ…

ಕತಾರ್ ನಲ್ಲಿ ಉದ್ಯೋಗದಲ್ಲಿದ್ದ ಕರಾವಳಿಯ ವ್ಯಕ್ತಿ ಕುಸಿದು ಬಿದ್ದು ಸಾವು

ಕತಾರ್‌ನಲ್ಲಿ ಕೆಲಸ ಮಾಡುತ್ತಿದ್ದ ಕೋಟ ಸಮೀಪ ಕೋಟ ತಟ್ಟು ಪಡುಕರೆ ನಿವಾಸಿ ಮುಹಮ್ಮದ್‌ (45) ಕತಾರ್‌ನಲ್ಲಿ ಗುರುವಾರ ಬೆಳಗ್ಗೆ ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದಾರೆ. ಮೃತರು ತಾಯಿ, ಪತ್ನಿಯನ್ನು ಅಗಲಿದ್ದಾರೆ. ಕತಾರ್‌ನ ಸನಯ್ಯ ಎಂಬಲ್ಲಿ 14 ವರ್ಷಗಳಿಂದ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಅವರು ನಾಲ್ಕು…

error: Content is protected !!