ಬಂಟ್ವಾಳ: ಕಟೀಲು ಮೇಳದ ಚೌಕಿ ಸಹಾಯಕನೋರ್ವ ಯಕ್ಷಗಾನ ನಡೆಯುತ್ತಿದ್ದ ಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ. ಕಟೀಲು ಮೇಳದ ಐದನೇ ಮೇಳದ ಚೌಕಿ ಸಹಾಯಕ ಮಣಿನಾಲ್ಕೂರು ಗ್ರಾಮದ ಕೊಡಂಗೆ ನಿವಾಸಿ 45 ವರ್ಷದ ಅಚ್ಯುತ ನಾಯಕ್ ಅವರು ಹೃದಯ ಘಾತದಿಂದ ನಿಧನರಾದ ಮೇಳದ ಚೌಕಿ ಸಹಾಯರಾಗಿದ್ದಾರೆ.

ಕಟೀಲು ಮೇಳದ ಯಕ್ಷಗಾನವು ಪ್ರಸ್ತುತ ಕಾಲಮಿತಿ ಯಕ್ಷಗಾನವಾಗಿದ್ದು, ರಾತ್ರಿ 1 ಗಂಟೆಯ ಸುಮಾರಿಗೆ ಯಕ್ಷಗಾನ ಮುಗಿದು ಪರಿಕರಗಳನ್ನು ಜೋಡಿಸುತ್ತಿದ್ದ ವೇಳೆ ಅಚ್ಯುತ ಅವರು ಏಕಾಏಕಿ ಅಸ್ವಸ್ಥತೆಗೊಂಡಿದ್ದಾರೆ ಎನ್ನಲಾಗಿದೆ. ಆಗ ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದಾಗ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಕಟೀಲು ಮೇಳದ ಚೌಕಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಅವರು ಈ ಹಿಂದೆ ಸರಪಾಡಿ ಸೇರಿದಂತೆ ಹಲವೆಡೆ ಸಣ್ಣ ಹೋಟೆಲ್ ನಡೆಸುತ್ತಿದ್ದರು. ಜೊತೆಗೆ ಅಡುಗೆ ಕೆಲಸಕ್ಕೂ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.

By admin

Leave a Reply

Your email address will not be published. Required fields are marked *

error: Content is protected !!