ಮಂಗಳೂರು, ನಗರದ ಖಾಸಗಿ ಕಾಲೇಜಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಡ್ಯಾನ್ಸ್ ಮಾಡಿದ್ದಾರೆ ಎಂಬ ಆರೋಪದಲ್ಲಿ ನಾಲ್ಕು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ.

ಈ ಕಾಲೇಜಿನಲ್ಲಿ ಬುಧವಾರ ಸಂಜೆ ಕಾರ್ಯಕ್ರಮ ನಡೆದಿದ್ದು, ಇದಾದ ಬಳಿಕ ನಾಲ್ವರು ವಿದ್ಯಾರ್ಥಿಗಳು ಬುರ್ಖಾ ಧರಿಸಿ ವೇದಿಕೆಯೇರಿ ನೃತ್ಯ ಪ್ರದರ್ಶನ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಕಾಲೇಜು ಆಡಳಿತ ಮಂಡಳಿ ಆಂತರಿಕ ವಿಚಾರಣೆಯ ಬಳಿಕ ಸಂಬಂಧಪಟ್ಟ ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ.

By admin

Leave a Reply

Your email address will not be published. Required fields are marked *

error: Content is protected !!