ಉಡುಪಿ, ಡಿ.9: ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕವಾದ ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜ.12ರಂದು ಆಚರಿಸಲ್ಪಡುವ ‘ರಾಷ್ಟ್ರೀಯ ಯುವ ದಿನಾಚರಣೆ’ಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ‘ಯುವ ಸಂಗಮ’ದಲ್ಲಿ ಭಾಗಿಯಾಗಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಡುಪಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾದ ಸಮ್ಮಿಲನದೊಂದಿಗೆ ನಡೆಯಲಿರುವ ಈ ಸಮಾವೇಶದಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಂದ ಸುಮಾರು 2 ಲಕ್ಷಕ್ಕೂ ಮಿಕ್ಕಿ ಯುವ ಮೋರ್ಚಾ ಪ್ರತಿನಿಧಿಗಳು ಮತ್ತು ಯುವ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!