ಮಂಗಳೂರು: ನಗರದ ಕಂಕನಾಡಿಯಲ್ಲಿ ನಡೆದಿದ್ದ ಕುಕ್ಕರ್ ಸ್ಫೋಟದ ಆರೋಪಿ, ಶಂಕಿತ ಉಗ್ರ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆಯ ವೈದ್ಯರು ಮತ್ತು ಅಧಿಕಾರಿಗಳ ಶಿಫಾರಸಿನ ಮೇರೆಗೆ ಶಾರಿಕ್ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.
ಇಂದು ಬೆಳಗ್ಗೆ ಶಾರಿಕ್ ನನ್ನು ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆತನಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿಯ ನಾಗುರಿ ಎಂಬಲ್ಲಿ ಆಟೋ ರಿಕ್ಷಾದಲ್ಲಿ ಸ್ಫೋಟವಾಗಿತ್ತು. ಈ ಸ್ಪೋಟದಲ್ಲಿ ಶಾರಿಕ್ ಗಾಯಗೊಂಡಿದ್ದ. ಉಗ್ರ ಗೋಡೆ ಬರಹ ಪ್ರಕರಣದ ಆರೋಪಿಯಾಗಿದ್ದ ಶಾರಿಕ್ ಗೆ ಉಗ್ರ ನಂಟಿರುವ ಬಗ್ಗೆ ಪೊಲೀಸರು ತನಿಖೆಯಿಂದ ಖಚಿತ ಪಡಿಸಿದ್ದರು.