ಸುಬ್ರಹ್ಮಣ್ಯ: ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಕಾಣಿಸಿಕೊಂಡಿದ್ದು ಲೋಕೊಪೈಲಟ್ ಸಮಯಪ್ರಜ್ಞೆಯಿಂದಾಗಿ ಭಾರಿ ಅನಾಹುತವೊಂದು ತಪ್ಪಿದ ಘಟನೆ ಕುಕ್ಕೆ ಸುಬ್ರಮಣ್ಯ ರೋಡ್ (ನೆಟ್ಟಣ) ರೈಲ್ವೇ ನಿಲ್ದಾಣದಲ್ಲಿ ಇಂದು ನಸುಕಿನ ಜಾವ ನಡೆದಿದೆ.

ಸುಳ್ಯ,ಬೆಳ್ತಂಗಡಿ,ಮಂಗಳೂರು,ಪುತ್ತೂರು, ಅಗ್ನಿಶಾಮಕ ದಳದ ತಂಡದ ನಾಲ್ಕು ಅಗ್ನಿ ಶಮನ ಯಂತ್ರಗಳು ಹಾಗೂ ರೈಲ್ವೇ ಇಲಾಖೆಯ ಸಹಕಾರದೊಂದಿಗೆ ಅನಿಲ ಸೋರಿಕೆಯನ್ನು ತಡೆಯುವ ಕಾರ್ಯಚರಣೆ ನಡೆದಿದೆ. ಮಂಗಳೂರಿನಿಂದ ಮಹರಾಷ್ಟ್ರಕ್ಕೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ರೈಲು ಸುಬ್ರಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ರಾತ್ರಿ ಗಂಟೆ 2.30ರ ಸುಮಾರಿಗೆಕ್ರಾಸಿಂಗ್‌ಗಾಗಿ ನಿಲ್ಲಿಸಲಾಗಿತ್ತು. ಈ ಸಮಯದಲ್ಲಿ ಲೋಕೊಪೈಲೆಟ್ ಕೆಳಗಿಳಿದಾಗ ಸುಮಾರು 43 ಗೂಡ್ಸ್ ಪ್ಯಾನೆಲ್‌ಗಳ ಪೈಕಿ ನಾಲ್ಕನೇ ಟ್ಯಾಂಕ್‌ನಿಂದ ಅನಿಲ ಸೋರಿಕೆಯಾಗುತ್ತಿರುವುದು ತಿಳಿದು ಬಂದಿದೆ.ತಕ್ಷಣವೇ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ರೈಲ್ವೇ ನಿಲ್ದಾಣದಿಂದ ಪುತ್ತೂರುಅಗ್ನಿಶಾಮಕದಳಕ್ಕೆ ಬಂದ ಕರೆಯಂತೆ ರಾತ್ರೋ ರಾತ್ರಿ ನೆಟ್ಟಣಕ್ಕೆ ತೆರಳಿದ ಕಾರ್ಯಾಚರಣೆ ನಡೆಸಿದರು. ಅನಿಲ ಸೋರಿಕೆಯಾದಲ್ಲಿ ಹೆಚ್ಚಿನ ಅನಾಹುತ ತಪ್ಪಿಸುವ ಸಲುವಾಗಿ ಸುಳ್ಯ, ಬೆಳ್ತಂಗಡಿ, ಹಾಗೂ ಮಂಗಳೂರಿನಿಂದಲೂ ಹೆಚ್ಚುವ ರಿ ವಾಹನಗಳನ್ನು ತರಿಸಲಾಯಿತು. 

ಮಂಗಳೂರು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಅವರ ನೇತೃತ್ವದಲ್ಲಿ ಪುತ್ತೂರು ಅಗ್ನಿಶಾಮಕದಳದ ಠಾಣಾಧಿಕಾರಿ ಪಿ.ಆನಂದ್, ಮುಖ್ಯ ಅಗ್ನಿಶಾಮಕ ರುಕ್ಮಯ್ಯ ಗೌಡ, ಚಾಲಕ ಯಾದವ್, ಸಿಬ್ಬಂದಿಗಳಾದ ಮಂಜುನಾಥ್,ಗೃಹ ರಕ್ಷಕ ದಳದ ಮಂಜುನಾಥ್ ಸಹಿತ ಸುಳ್ಯ, ಬೆಳ್ತಂಗಡಿಯ ಅಗ್ನಿಶಾಮಕ ದಳದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

By admin

Leave a Reply

Your email address will not be published. Required fields are marked *

error: Content is protected !!