ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆಯಲ್ಲಿರುವ, ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು ಜನವರಿ 17 ರ ಬಳಿಕ ವಿಸ್ತರಣೆ ಆಗುವ ನಿರೀಕ್ಷೆ ಇದೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದ್ದು, ಕೇಂದ್ರದ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಿದ್ದು, ಮೂರು ಪ್ರತ್ಯೇಕ ಪಟ್ಟಿಯನ್ನ ಸಿದ್ಧಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಜ,೧೭ಮತ್ತು ೧೮ ರಂದು ದೆಹಲಿಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದ್ದು, ಆ ಸಭೆಯ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆ ಇದೆ. ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ , ರಮೇಶ್ ಜಾರಕಿಹೊಳಿ ಸೇರಿ ಸದ್ಯ ಖಾಲಿಯಿರುವ ಐದು ಸಚಿವ ಸ್ಥಾನಗಳ ಭರ್ತಿ ಮಾಡಲು ಸಿಎಂ ಬೊಮ್ಮಾಯಿ ಲೆಕ್ಕಚಾರ ಹಾಕಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಹೊಸಮುಖಗಳಿಗೆ ಅವಕಾಶ ಕಲ್ಪಿಸುವ ಲೆಕ್ಕಾಚಾರ ಸಿಎಂ ಸಿದ್ದಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಚುನಾವಣಾ ವರ್ಷ ಆಗಿರುವ ಕಾರಣ ಹೊಸ ಮುಖಗಳಿಗೆ ಅವಕಾಶ ಕೊಟ್ಟು ಜನರ ಮನ ಗೆಲ್ಲುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕರಾವಳಿಯ ಹೊಸ ಮುಖಕ್ಕೆ ಅವಕಾಶ ಸಾಧ್ಯತೆ

ಕರಾವಳಿಯ ಓರ್ವ ಆಕ್ಟಿವ್ ಶಾಸಕನಿಗೆ ಸಚಿವ ಸ್ಥಾನ ನೀಡುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ. ಹಿಂದುತ್ವ ಮತ್ತು ಅಭಿವೃದ್ದಿ ಎರಡರಲ್ಲೂ ಗುರುತಿಸಿಕೊಂಡಿರುವ ಯುವ ನಾಯಕನಿಗೆ ಸಚಿವ ಸ್ಥಾನ ದೊರೆಯುತ್ತೆ ಎನ್ನಲಾಗುತ್ತಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅಥವಾ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಗೆ ಮಂತ್ರಿಗಿರಿ ಸಿಗುವ ಸಾಧ್ಯತೆ ಬಗ್ಗೆ ಚರ್ಚೆ ನಡೆಯುತ್ತಿದೆ. ಇಬ್ಬರೂ ಹಿಂದುತ್ವ ಮತ್ತು ಅಭಿವೃದ್ದಿಯಲ್ಲಿ ರಾಜಿ ಮಾಡಿಕೊಂಡಿಲ್ಲ. ವರಿಷ್ಠರಿಗೂ ಇಬ್ಬರ ಶಿಸ್ತಿನ ರಾಜಕಾರಣ ಇಷ್ಟವಾಗಿದೆ ಎನ್ನಲಾಗುತ್ತಿದೆ. ಜೊತೆ ಎಲ್ಲಾ ಬಣಗಳ ಜೊತೆಯೂ ಇವರು ಒಳ್ಳೆಯ ಭಾಂದವ್ಯ ಹೊಂದಿದ್ದಾರೆ. ಜೊತೆಗೆ ಆರ್ ಎಸ್ ಎಸ್ ಕೂಡ ಇವರ ಬಗ್ಗೆ ಒಲವು ಹೊಂದಿದೆ ಎನ್ನಲಾಗುತ್ತಿದೆ.

By admin

Leave a Reply

Your email address will not be published. Required fields are marked *

error: Content is protected !!