ತೊಕ್ಕೊಟ್ಟು, ರಾ.ಹೆ. 66 ರಲ್ಲಿ ಇಂದು ರಾತ್ರಿ ಸಂಭವಿಸಿದ ಭೀಕರ  ಕಾರು ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರು ಯುವತಿಯರು ಸಣ್ಣ ಗಾಯಗಳೊಂದಿಗೆ ಪಾರಾಗಿರುವ ಘಟನೆ ಕೊಲ್ಯ- ಅಡ್ಕ ಬಳಿ ಸಂಭವಿಸಿದೆ. ಉಪ್ಪಳ ಹಿದಾಯತ್ ನಗರ ನಿವಾಸಿ ಬಷಾರ ಅಹಮ್ಮದ್ (22) ಮೃತರು.

ಇನ್ನೋರ್ವ ಗಾಯಾಳು  ಗುರುತು ಪತ್ತೆಯಾಗಿಲ್ಲ. ಕೇರಳ ಕಣ್ಣೂರು ನಿವಾಸಿ ಫಾತಿಮ ಹಾಗೂ ರೇವತಿ ಎಂಬವರಿಗೆ ಗಾಯಗಳಾಗಿವೆ. ನಾಲ್ವರಿದ್ದ ಕಾರು ಕೊಲ್ಯ- ಅಡ್ಕ ಬಳಿ ರಸ್ತೆ ವಿಭಜಕವನ್ನು ಏರಿ, ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಈ ಸಂದರ್ಭ ಕಾರು ಚಲಾಯಿಸುತ್ತಿದ್ದ ಬಷಾರ ಅಹಮ್ಮದ್ ಅದರೊಳಕ್ಕೆ ಸಿಲುಕಿ, ತಲೆ ಸೇರಿದಂತೆ ದೇಹಕ್ಕೆ ಸಂಪೂರ್ಣ ಗಾಯಗೊಂಡು ಒಳಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನುಳಿದ ಮೂವರನ್ನು ಸ್ಥಳೀಯರು ಸೇರಿ ಕಾರಿನಿಂದ ಹಲವು ನಿಮಿಷಗಳ ಕಾಲ ಕಾರ್ಯಾಚರಣೆ ನಡೆಸಿ ಹೊರತೆಗೆದಿದ್ದಾರೆ. ಈ ಪೈಕಿ ಓರ್ವ ಯುವತಿಯನ್ನು ಕಾರಿನಲ್ಲಿ ಪ್ರಶಾಂತ್ ಗಟ್ಟಿ ಎಂಬವರು ಎ.ಜೆ ಆಸ್ಪತ್ರೆಗೆ ಕೊಂಡೊಯ್ದು ಮಾನವೀಯತೆ ಮೆರೆದರೆ, ಇನ್ನೋರ್ವಳನ್ನು ಟಿ.ಟಿ ಮೂಲಕ ಅದೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಾಳುವನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.  ಗಾಯಾಳು ಪೈಕಿ ಫಾತಿಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿ ನಿಯಾಗಿದ್ದಾರೆ. ನಾಲ್ವರು  ಗೆಳೆಯರಾಗಿದ್ದರೆಂದು ತಿಳಿದುಬಂದಿದೆ.

By admin

Leave a Reply

Your email address will not be published. Required fields are marked *

error: Content is protected !!