ಅನಾರೋಗ್ಯದ ಕಾರಣದಿಂದಾಗಿ ಹಿರಿಯ ಭಾಗವತ ನಾರಾಯಣ ಬಲಿಪ ಅವರು ನಿಧನರಾಗಿದ್ದಾರೆ. ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಕಳೆದ ಹದಿನೈದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ಬಲಿಪ ಅವರು, ತೆಂಕು ತಿಟ್ಟಿನ ಮೇರು ಭಾಗವತರಾಗಿದ್ದರು. ಕಳೆದ 15 ದಿನದಿಂದ ಅಸ್ವಸ್ಥರಾಗಿದ್ದರು. ಇಂದು ಸಂಜೆ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯಕ್ಷಗಾನ ಕ್ಷೇತ್ರಕ್ಕೆ ಸುದೀರ್ಘ 60 ವರ್ಷಗಳ ಕಾಲ ಸೇವೆ ನೀಡಿದ್ದರು. ಬಲಿಪರು ಹಾಡುಗಳು ಯಕ್ಷಗಾನ ರಂಗದಲ್ಲಿ ಜನಜನಿತವಾಗಿವೆ. ಕಟೀಲು ಮೇಳದಲ್ಲಿ ಹಲವಾರು ವರುಷಗಳ ಕಾಲ ಸೇವೆ ಸಲ್ಲಿಸಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸಾಮಗ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಬಲಿಪ ಅವರು ಪಡೆದುಕೊಂಡಿದ್ದಾರೆ.

ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಇವರು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದಾರೆ. ಇವರು ತೆಂಕುತಿಟ್ಟಿನ ಪ್ರಸಿದ್ಧ ಮತ್ತು ಹಿರಿಯ ಭಾಗವತರಾಗಿದ್ದರು. ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಯಕ್ಷಗಾನದ ಹಲವಾರು ಪ್ರಸಂಗಗಳನ್ನು ರಚಿಸಿದ್ದಾರೆ. ಯಕ್ಷಗಾನ ಹಾಡುಗಳ ಅನೇಕ ಕೃತಿಗಳನ್ನೂ ರಚಿಸಿದ್ದಾರೆ.

ಬಲಿಪರು ಕಾಸರಗೋಡಿನ ಪಡ್ರೆ ಗ್ರಾಮದಲ್ಲಿ ಮಾರ್ಚ್ ೧೩, ೧೯೩೮ರಂದು ಜನಿಸಿದರು. ಇವರ ತಂದೆ ಬಲಿಪ ಮಾಧವ ಭಟ್ ಮತ್ತು ತಾಯಿ ಸರಸ್ವತಿ. ಇವರು ೭ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ತಮ್ಮ ಅಜ್ಜ ದಿ.ಬಲಿಪ ನಾರಾಯಣ ಭಾಗವತರಿಂದ ಭಾಗವತಿಕೆ ಕಲಿತು ೧೩ನೇ ವರ್ಷದಲ್ಲಿ ರಂಗ ಪ್ರವೇಶಗೈದು, ಸುದೀರ್ಘ ಸೇವೆಯನ್ನು ಯಕ್ಷಗಾನ ಕ್ಷೇತ್ರಕ್ಕೆ ನೀಡಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!