ಕಾಸರಗೋಡು : ರೈಲು ಬಡಿದು ಮಂಜೇಶ್ವರ ತಾಲೂಕು ಆಸ್ಪತ್ರೆಯ ಸಿಬಂದಿ ಯೋರ್ವ ಳು ಮೃತಪಟ್ಟ ಘಟನೆ ಬುಧವಾರ ಸಂಜೆ ಉಪ್ಪಳ ರೈಲ್ವೆ ನಿಲ್ದಾಣ ಪರಿಸರದಲ್ಲಿ ನಡೆದಿದೆ.
ಉಪ್ಪಳ ಮಂಗಲ್ಪಾಡಿ ಯಲ್ಲಿರುವ ಮಂಜೇಶ್ವರ ತಾಲೂಕು ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಪಿ. ಐಶ್ವರ್ಯ (27) ಮೃತ ಪಟ್ಟವರು.ಬುಧವಾರ ಸಂಜೆ ಕೆಲಸ ಮುಗಿಸಿ ನೀಲೇಶ್ವರ ದಲ್ಲಿರುವ ಮನೆಗೆ ತೆರಳಲು ಉಪ್ಪಳ ರೈಲು ನಿಲ್ದಾಣ ಸಮೀಪ ಹಳಿ ದಾಟುತ್ತಿದ್ದಾಗ ರೈಲು ಬಡಿದು ಈ ದುರ್ಘಟನೆ ನಡೆದಿದೆ.
ಮಂಜೇಶ್ವರ ಠಾಣಾ ಪೊಲೀಸರು ಮಹಜರು ನಡೆಸಿದರು.
ಐಶ್ವರ್ಯ ನೀಲೇಶ್ವರ ದೇವನ್ ಆರ್ಟ್ಸ್ ನ ವಿಪಿನ್ ರವರ ಪತ್ನಿ.