ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮೇ 10 ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಣೆ ಮಾಡಿದೆ. ರಾಜ್ಯದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.

ಇಂದು ಬೆಳಗ್ಗೆ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದ 224 ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈ ಪೈಕಿ ರಾಜ್ಯದಲ್ಲಿ 26 ಎಸ್ಸಿ ಮೀಸಲು ಕ್ಷೇತ್ರಗಳಾಗಿವೆ. ರಾಜ್ಯದಲ್ಲಿ 5.21 ಕೋಟಿ ಮತದಾರರು ಇದ್ದಾರೆ. ಮುಕ್ತ ನ್ಯಾಯ ಸಮ್ಮತ ಚುನಾವಣೆ ನಡೆಸಲು ಆಯೋಗ ಸಿದ್ಧವಾಗಿದೆ. 16ನೇ ವಿಧಾನಾಸಭೆಗೆ ಚುನಾವಣೆ ಸಂಪೂರ್ಣ ಸಿದ್ಧತೆ ನಡೆಸಲಾಗಿದೆ ಎಂದು ದೆಹಲಿಯ ವಿಜ್ಞಾನ ಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾ ಆಯೋಗ ತಿಳಿಸಿದೆ.

ಚುನಾವಣಾ ದಿನಾಂಕ ಘೋಷಣೆ ಹಿನ್ನಲೆಯಲ್ಲಿ ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ. ಎಲ್ಲಾ ಶಾಸಕರು, ಸಚಿವರಿಗೂ ನೀತಿ ಸಂಹಿತೆ ಅನ್ವಯ ಆಗಲಿದೆ. ಸರ್ಕಾರಿ ಕಾರು ಬಿಟ್ಟು, ಖಾಸಗಿ ಕಾರು ಬಳಕೆ ಮಾಡಬೇಕು. ಯಾವುದೇ ಸರ್ಕಾರಿ ಕಾರ್ಯಕ್ರಮ ಮಾಡೋದಕ್ಕೆ ಅವಕಾಶ ಇಲ್ಲ. ಸರ್ಕಾರಿ ಹೊಸ ಟೆಂಡರ್, ಹೊಸ ಕಾಮಗಾರಿಗೆ ಅವಕಾಶ ಇಲ್ಲ. ಶಾಸಕರು, ಸಚಿವರು ಹೊಸ ಘೋಷಣೆ ಮಾಡಲು ಅವಕಾಶ ಇಲ್ಲ. ಯಾವುದೇ ಸ್ಥಳೀಯ ಸಂಸ್ಥೆ ಸಭೆ ನಡೆಸುವಂತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಅಭ್ಯರ್ಥಿಗಳ ಬ್ಯಾನರ್, ಫ್ಲೆಕ್ಸ್ ಅಳವಡಿಕೆ ಇಲ್ಲ. ಖಾಸಗಿ ಸ್ಥಳದಲ್ಲಿ ಬ್ಯಾನರ್ ಅಳವಡಿಕೆ ಚುನಾವಣಾ ಆಯೋಗದ ಅನುಮತಿ ಅಗತ್ಯವಾಗಿದೆ. ರಾಜಕೀಯ ಸಮಾವೇಶಗಳಿಗೆ ವಾಹನಗಳಲ್ಲಿ ಜನ ಕರೆತರುವಂತಿಲ್ಲ. ಯಾವುದೇ ಧಾರ್ಮಿಕ ಸ್ಥಳದಲ್ಲಿ ಚುನಾವಣಾ ಪ್ರಚಾರ ನಿಷೇಧ ಮಾಡಲಾಗಿದೆ.

ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು

ಮೇ 10ಕ್ಕೆ ವಿಧಾನಸಭಾ ಚುನಾವಣೆ
ಮೇ 13ಕ್ಕೆ ಚುನಾವಣಾ ಫಲಿತಾಂಶ
ಎ. 20ಕ್ಕೆ ನಾಮಪತ್ರ ಸಲ್ಲಿಕೆ ಆರಂಭ
ಎ. 21ಕ್ಕೆ ನಾಮಪತ್ರ ಪರಿಶೀಲಣೆ
ಎ. 24ಕ್ಕೆ ನಾಮಪತ್ರ ಹಿಂಪಡೆಯಲು ಅವಕಾಶ
ಇಂದಿನಿಂದಲೇ ಮಾದರಿ ಚುನಾವಣಾ ನೀತಿಸಂಹಿತೆ ಜಾರಿ
ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ

80 ಮೇಲ್ಪಟ್ಟವರು, ವಿಕಲ ಚೇತನರಿಗೆ ಮನೆಯಿಂದಲೇ ಮತದಾನ

80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ
ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ
ಮತಗಟ್ಟೆಗೆ ತೆರಳಲು ಸಮಸ್ಯೆಯಾಗುವ ಹಿನ್ನೆಲೆಯಲ್ಲಿ ಮನೆಯಿಂದಲೇ ಮತದಾನ
5.55 ಲಕ್ಷ ವಿಕಲ ಚೇತನ ಮತದಾರರಿದ್ದಾರೆ
ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಅವಕಾಶ ನೀಡಲಾಗಿದೆ
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಚುನಾವಣಾ ಆಯುಕ್ತರು

By admin

Leave a Reply

Your email address will not be published. Required fields are marked *

error: Content is protected !!