ಕಡಬ, ಶುಕ್ರವಾರದಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಯೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದ ಕೋಡಿಂಬಾಳದಿಂದ ವರದಿಯಾಗಿದೆ. ಗುಂಡಿಮಜಲ್ ನಿವಾಸಿ ಮಂಜುನಾಥ್ ಎಂಬವರ ಪುತ್ರ ಅದ್ವೈತ್ ಶೆಟ್ಟಿ(15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಅದ್ವೈತ್ ಶೆಟ್ಟಿ ಮಾ. 29ರ ಬುಧವಾರ ಸಂಜೆ ಮನೆಯಿಂದ ನಾಪತ್ತೆಯಾಗಿದ್ದ. ರಾತ್ರಿಯಿಡೀ ಮನೆಯವರು ಹುಡುಕಾಟ ನಡೆಸಿದ್ದರು. ಆದರೆ ಇಂದು ಬೆಳಗ್ಗೆವರೆಗೂ ಬಾಲಕ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಕುಮಾರಧಾರಾ ನದಿಯ ನಾಕೂರು ಗಯ ಎಂಬಲ್ಲಿ ಬ್ಯಾಗ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪುತ್ತೂರು ಅಗ್ನಿಶಾಮಕ ದಳದಿಂದ ನದಿಯಲ್ಲಿ ಶೋಧ ನಡೆಸಿದ್ದಾರೆ. ಈ ವೇಳೆ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

By admin

Leave a Reply

Your email address will not be published. Required fields are marked *

error: Content is protected !!