ಕರ್ನಾಟಕದ ವಿಧಾನಸಭೆ ಚುನಾವಣೆಗೆ ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ರಾಜ್ಯದ 224 ಕ್ಷೇತ್ರಗಳಿಗೆ ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಮಂಗಳವಾರ ರಾತ್ರಿ ಅಭ್ಯರ್ಥಿಗಳ ಪಟ್ಟಿಯನ್ನು ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬಿಡುಗಡೆ ಮಾಡಿದರು. ವರುಣ ಕ್ಷೇತ್ರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಎದುರಾಳಿಯಾಗಿ ವಸತಿ ಸಚಿವರು ಆಗಿರುವ ವಿ. ಸೋಮಣ್ಣ ಹೆಸರು ಘೋಷಣೆ ಮಾಡಲಾಗಿದೆ. ಸಮೀಕ್ಷೆ; ಶಿಕಾರಿಪುರದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧಿಸಿದರೆ ಗೆಲುವು ಬಿಜೆಪಿ ಇನ್ನೂ 35 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಾಕಿ ಉಳಿಸಿಕೊಂಡಿದೆ. ಏಪ್ರಿಲ್ 13ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಏಪ್ರಿಲ್ 20ರ ತನಕ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಅವಕಾಶವಿದೆ. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ಶಿಕಾರಿಪುರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಘೋಷಿಸಲಾಗಿದೆ. ಸಿದ್ದರಾಮಯ್ಯ ಕೋಲಾರ ಬಿಟ್ಟು ವರುಣ ಕ್ಷೇತ್ರದಲ್ಲಿ ನಿಲ್ತಾರೆ: ವರ್ತೂರ್ ಪ್ರಕಾಶ್ ಭವಿಷ್ಯ ಶಿಕಾರಿಪುರ ಕ್ಷೇತ್ರದ ಹಾಲಿ ಶಾಸಕರು ಬಿ. ಎಸ್‌. ಯಡಿಯೂರಪ್ಪ. ಆದರೆ 2023-24ನೇ ಸಾಲಿನ ಬಜೆಟ್ ಅಧಿವೇಶನದಲ್ಲಿಯೇ ಅವರು ಈ ಬಾರಿಯ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇದು ನನ್ನ ಕೊನೆಯ ಅಧಿವೇಶನ, ಚುನಾವಣಾ ನಿವೃತ್ತಿ ಪಡೆಯುತ್ತೇನೆ ಎಂದು ಘೋಷಣೆ ಮಾಡಿದ್ದರು. ಆದರೆ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಸದಾ ಕೆಲಸ ಮಾಡುತ್ತೇನೆ ಎಂದು ಹೇಳಿದ್ದರು. ವಿಜಯೇಂದ್ರ ವಿರುದ್ಧ ಕೈ ಅಭ್ಯರ್ಥಿ; ಸಿದ್ದರಾಮಯ್ಯ ಮನೆ ಮುಂದೆ ಗಲಾಟೆ! ಈ ಬಾರಿಯ ಚುನಾವಣೆಯಲ್ಲಿ ಹೈಕಮಾಂಡ್ ಒಪ್ಪಿಗೆ ನೀಡಿದರೆ ಬಿ. ವೈ. ವಿಜಯೇಂದ್ರ ಶಿಕಾರಿಪುರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಯಡಿಯೂರಪ್ಪ ಘೋಷಣೆ ಮಾಡಿದ್ದರು. ಬಿಜೆಪಿ ಮೊದಲ ಪಟ್ಟಿಯಲ್ಲಿಯೇ ಶಿಕಾರಿಪುರಕ್ಕೆ ಕರ್ನಾಟಕ ಬಿಜೆಪಿಯ ಉಪಾಧ್ಯಕ್ಷರೂ ಆಗಿರುವ ಬಿ. ವೈ. ವಿಜಯೇಂದ್ರ ಹೆಸರು ಘೋಷಣೆ ಮಾಡಿದೆ.

By admin

Leave a Reply

Your email address will not be published. Required fields are marked *

error: Content is protected !!