ಉಡುಪಿ, ಕರ್ನಾಟಕ ವಿಧಾನಸಭಾ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸಿರುವ ಕಾಂಗ್ರೆಸ್ ಪಕ್ಷ ಇದೀಗ ತನ್ನ ಐದನೇ ಗ್ಯಾರಂಟಿ ಘೋಷಣೆ ಮಾಡಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವುದಾಗಿ ಘೋಷಣೆ ಮಾಡಿದೆ.

ಈಗಾಗಲೇ ಕಾಂಗ್ರೆಸ್ ಪಕ್ಷ ಗೃಹಜ್ಯೋತಿ – 200 ಯೂನಿಟ್​ ವಿದ್ಯುತ್​ ಉಚಿತ, ಗೃಹಲಕ್ಷ್ಮಿ – ಪ್ರತಿ ಮನೆ ಯಜಮಾನಿಗೆ ಮಾಸಿಕ 2000 ರೂ., ಅನ್ನಭಾಗ್ಯ- ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ, ಯುವ ನಿಧಿ – ಪದವೀಧರರಿಗೆ 3000 ರೂ ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ ನಿರುದ್ಯೋಗ ಭತ್ಯೆ ನೀಡುವ 4 ಘೋಷಣೆಗಳನ್ನು ಮಾಡಿದೆ. ಇದೀಗ ರಾಹುಲ್ ಗಾಂಧಿ 5ನೇ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಸ್ವತಃ ಕಾಂಗ್ರೆಸ್ ಪಕ್ಷದ ಸ್ಚಾರ್ ಪ್ರಚಾರಕ ರಾಹುಲ್ ಗಾಂಧಿ ಮಾಹಿತಿ ನೀಡಿದ್ದು, ಮಂಗಳೂರಿನಲ್ಲಿ ಗುರುವಾರ ನಡೆದ ಕಾಂಗ್ರೆಸ್‌ ಪ್ರಚಾರ ಸಮಾವೇಶದಲ್ಲಿ ರಾಹುಲ್‌ ಗಾಂಧಿ 5ನೇ ಗ್ಯಾರಂಟಿಯನ್ನು ಘೋಷಣೆ ಮಾಡಿದರು. ಮಂಗಳೂರು ನಗರದ ಹೊರವಲಯದ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಚುನಾವಣ‌ ಪ್ರಚಾರದ ಬಹಿರಂಗ ಸಭೆಯಲ್ಲಿ ಈ ಘೋಷಣೆ ಮಾಡಿದ್ದಾರೆ.

ಸಾರ್ವಜನಿಕ ಬಸ್‌ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವುದಾಗಿ ಅವರು ತಿಳಿಸಿದ್ದು, ಮೊದಲ ನಾಲ್ಕೂ ಗ್ಯಾರಂಟಿ ಯೋಜನೆಗೆ ಸೇರಿ ಈ ಐದೂ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲೇ ಜಾರಿ ಮಾಡಲಾಗುವುದು ಎಂದು ಅವರು ಹೇಳಿದರು.

By admin

Leave a Reply

Your email address will not be published. Required fields are marked *

error: Content is protected !!