ಮಂಗಳೂರು : ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಬಂಧಿತರನ್ನು ಪುನಿತ್ ಶಿವನಗರ, ನಿಶಾಂತ್ ಕುಮಾರ್, ರಾಕೇಶ್ ಮತ್ತು ದಿನೇಶ್ ಕುಮಾರ್ ಶಾಲೆಪದವು ಎಂದು ಗುರುತಿಸಲಾಗಿದೆ.

4 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, ಇತರ ಭಾಗಿದಾರರನ್ನು ಗುರುತಿಸುತ್ತಿದ್ದೇವೆ. ಸಂಬಂಧಪಟ್ಟ ಎಲ್ಲ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯಲ್ಲಿ, ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಒಟ್ಟು 5 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು ಕಾನೂನು ಸುವ್ಯವಸ್ಥೆ ಕಾಪಾಡಲು 5 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

By admin

Leave a Reply

Your email address will not be published. Required fields are marked *

error: Content is protected !!