ಪುತ್ತೂರು: ಪಕ್ಷದ ಕಾರ್ಯಕರ್ತರಿಗೆ ಪೊಲೀಸ್‌ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ ಪುತ್ತೂರಿಗೆ ಬಿಜೆಪಿ ಶಾಸಕ, ಮಾಜಿ ಕೇಂದ್ರ ಸಚಿವರಾಗಿರುವ ಬಸನ ಗೌಡ ಪಾಟೀಲ್‌ ಯತ್ನಾಳ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದ್ದಾರೆ.

ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆ ಬಳಿಗೆ ಬಂದ ಯತ್ನಾಳ್‌ ಅವರನ್ನು ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್ ಪುತ್ತಿಲ ಅವರು ಸ್ವಾಗತಿಸಿ, ಆಸ್ಪತ್ರೆಗೆ ಕರೆದೊಯ್ದು, ಗಾಯಾಳುಗಳ ಸ್ಥಿತಿ ಗತಿಯನ್ನು ವಿವರಿಸಿದರು.

ಈ ಸಂದರ್ಭ ಯತ್ನಾಳ್‌ ಹಲ್ಲೆ ಮಾಡಿದ್ದು ಯಾರು..? ಯಾರು ಆ ಅಧಿಕಾರಿಗಳು ಎಂದು ಕಾರ್ಯಕರ್ತರನ್ನು ಪ್ರಶ್ನಿಸಿದ್ದಾರೆ.

ಈ ವೇಳೆ ಗಾಯಾಳುಗಳು ಹಾಗೂ ಪಕ್ಷದ ಕಾರ್ಯಕರ್ತರು ತಮ್ಮದೇ ಬಿಜೆಪಿ ನಾಯಕರ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಮಾಜಿ ಶಾಸಕರು ಕೂಡಾ ಆಸ್ಪತ್ರೆಗೆ ಭೇಟಿ ನೀಡದಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!