ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಉಜಿರೆ ಗ್ರಾಮ ಪಂಚಾಯಿತಿ ಸಿಬ್ಬಂದಿಯನ್ನು ಅಮಾನತುಗೊಳಿಸಿ ಪಿಡಿಓ ಆದೇಶ ಹೊರಡಿಸಿದ್ದಾರೆ.
ರಾಜ್ಯ ವಿಧಾಸನಭೆ ಚುನಾವಣೆ ಮುಗಿದು 10 ದಿನ ಕಳೆದಿದ್ದು, ಗೆದ್ದ ನಾಯಕರು ವಿಜಯೋತ್ಸವ ಆಚರಿಸುತ್ತಿದ್ದಾರೆ. ಇದೆ ರೀತಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಉಜಿರೆಯ ಗ್ರಾಮ ಪಂಚಾಯಿತಿ ಸಿಬ್ಬಂದಿಯನ್ನು ಅಮಾನತುಗೊಳಿಸಿ ಪಿಡಿಓ ಆದೇಶ ಹೊರಡಿಸಿದ್ದಾರೆ. ನಾಗೇಶ್ ಅಮಾನತಾದ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಚುನಾವಣಾ ಪ್ರಚಾರ ಹಾಗೂ ವಿಜಯೋತ್ಸವದಲ್ಲಿ ಪಂಚಾಯಿತಿ ಸಿಬ್ಬಂದಿ ನಾಗೇಶ್ ಬಿಜೆಪಿ ಬಾವುಟ ಹಿಡಿದು ತಿರುಗುವ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆ ಸೇವೆಯಿಂದ ಅಮಾನತು ಮಾಡಿ ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚ ಆದೇಶ ಹೊರಡಿಸಿದ್ದಾರೆ.