ಮಂಗಳೂರು: ಭಾರತದ ರಂಗಭೂಮಿಯಲ್ಲಿ ಯಕ್ಷಗಾನ ಒಂದು ಹೆಮ್ಮೆಯ ಕಲೆ. ಯಕ್ಷಗಾನ ಸಂಶೋಧನೆಯ ಮೂಲಕ ನೋಡಿದಾಗಲೂ ಯಕ್ಷಗಾನ ವಿಶ್ವಪ್ರಸಿದ್ದಿಯನ್ನು ಪಡೆದ ಕಲೆಯಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹೊಸ ಭಾಷ್ಯೆಯನ್ನು ಬರೆದಿದೆ ಎಂದು ಹಿರಿಯ ಯಕ್ಷಗಾನ ವಿದ್ವಾಂಸ ಪ್ರಭಾಕರ ಜೋಷಿ ತಿಳಿಸಿದರು.

ಅಡ್ಯಾರ್ ಗಾರ್ಡನ್ ನಲ್ಲಿ ಜರಗಿದ ಯಕ್ಷಧ್ರುವ ಪಟ್ಲ ಸಂಭ್ರಮ 2023 ರ ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳ ಯಕ್ಷಗಾನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪಟ್ಲ ಭಾಗವತರ ಜನಪ್ರಿಯತೆ ಮತ್ತು ಜವಾಬ್ದಾರಿ ಏನು ಎಂಬುದನ್ನು ಪಟ್ಲ ಫೌಂಡೇಶನ್ ಟ್ರಸ್ಟ್ ನ ಮೂಲಕ ತಿಳಿಯ ಬಹುದು.
ಪ್ರಸ್ತಾವಿಕವಾಗಿ ಮಾತನಾಡಿದ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ ಮಾತನಾಡಿ ಯಕ್ಷಗಾನದ ಪಾರಂಪರಿಕೆ, ಸೊಗಡನ್ನು ಉಳಿಸುವ ಪ್ರಯತ್ನವೇ ಯಕ್ಷಗಾನ ಸ್ಪರ್ಧೆಯ ಉದ್ದೇಶವಾಗಿದೆ ಎಂದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕಲ್ಕೂರ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮಹೇಶ್ ಮೋಟರ್ಸ್ ಸಂಸ್ಥೆಯ ಮಾಲಕ ಜಯರಾಮ ಶೇಖ, ಬಹರೈನ್ – ಸೌದಿ ಘಟಕದ ಅಧ್ಯಕ್ಷ ವಿ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು.
ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ಕುಂಬಳೆ ಸುಂದರ ರಾವ್ ವೇದಿಕೆಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳ ಯಕ್ಷಗಾನ ಬಯಲಾಟ ಸ್ಪರ್ಧೆ ನಡೆಯಿತು. ಡಾ ಪುತ್ತೂರು ಶ್ರೀಧರ ಭಂಡಾರಿ ವೇದಿಕೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಯಕ್ಷಗಾನ ಬಯಲಾಟ ಸ್ಪರ್ಧೆ ನಡೆಯಿತು.

ತೀರ್ಪುಗಾರರು
ಹೈಸ್ಕೂಲ್ ವಿಭಾಗ

  • ವಾಟೆಪಡ್ಪು ವಿಷ್ಣು ಶರ್ಮ
  • ದಿವಿತ್ ಕೋಟ್ಯಾನ್
  • ಆರತಿ ಪಟ್ರಮೆ

ಕಾಲೇಜು ವಿಭಾಗ
*ಕೃಷ್ಣ ಪ್ರಕಾಶ ಉಳಿತ್ತಾಯ
*ಉಬರಡ್ಕ ಉಮೇಶ್ ಶೆಟ್ಟಿ
*ಸಂಜಯ್ ಕುಮಾರ್ ಗೋಣಿಬೀಡು

By admin

Leave a Reply

Your email address will not be published. Required fields are marked *

error: Content is protected !!