ಬೆಳ್ತಂಗಡಿ: ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿ ಪ್ರಸ್ತುತ ಮದುವೆಯಾಗಿ ಕಳೆದ ಒಂದು ವರ್ಷದಿಂದ ಚಿಕ್ಕಮಗಳೂರು ಪತಿ ಮನೆಯಲ್ಲಿದ್ದವರು.

ಸಾಲಿಯತ್ ಅವರು ಎದೆ ನೋವಿನಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಬೆಳಗ್ಗೆ ಮೃತಪಟ್ಟಿದ್ದು, ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ.

ಇನ್ನು ಸಾಲಿಯತ್ ಅವರು ವಾಲಿಬಾಲ್ ಆಟದಲ್ಲಿ ಅತ್ಯಂತ ಉತ್ತಮ ಪ್ರದರ್ಶನ ನೀಡಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತರುವಲ್ಲಿ ಶ್ರಮಿಸಿದ್ದರು.

By admin

Leave a Reply

Your email address will not be published. Required fields are marked *

error: Content is protected !!